ಉಡುಪಿ: ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ರಾಜ್ಯದ ಎಲ್ಲಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ನಡೆಯುವ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಉಡುಪಿ ಬನ್ನಂಜೆ ಸಮಾಜ ಕಲ್ಯಾಣ ಇಲಾಖೆ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯದಲ್ಲಿ ಚಾಲನೆ ನೀಡಿದರು.
ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.







.jpeg)


