Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣ...

ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 Oct 2022 2:27 PM IST
share
ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು  ಇದೇ ವರ್ಷ ಬೆಳಗಾವಿ ಸುವರ್ಣ ಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ “ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ”ಗೆ ಚಾಲನೆ ನೀಡಿ ಮಾತನಾಡಿದರು.

ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು,  ಆಗ ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ  ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.

ರಾಷ್ಟ್ರೀಯ ದಾಖಲೆಗಳಲ್ಲಿ ನೋಂದಣಿ

ಸ್ವಾತಂತ್ರ್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್ ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ಆರ್ಚೈವ್ಸ್  ದಾಖಲೆಗಳಿಗೂ ಸಹ ಕಳಿಸಿಕೊಟ್ಟು ನೊಂದಣಿ ಮಾಡಿಸುತ್ತೇವೆ ಎಂದು ತಿಳಿಸಿದರು.

ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಕ್ರಮ

ಕಿತ್ತೂರಿನಲ್ಲಿ ಶಿಥಿಲಗೊಡಿರುವ ಈಗಿರುವ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.  ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರ ಜತೆಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು. 

ಬೆಂಗಳೂರಿನಿಂದ ಇಂದು ಪ್ರಾರಂಭವಾದ ವಿಜಯ ಜ್ಯೋತಿ ಯಾತ್ರೆ ಅ. 23 ರಂದು ಕಿತ್ತೂರು ತಲುಪಲಿದೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಉಸ್ತುವಾರಿ ಗೋವಿಂದ ಕಾರಜೋಳ, ಸಚಿವ ಎಂಟಿಬಿ ನಾಗರಾಜ್, ಸಾಹಿತಿ ಲೀಲಾದೇವಿ ಆರ್ ಪ್ರಸಾದ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X