ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಆರೋಪಿ ದೀಪಕ್ ಟಿನು

Photo: instagram & twetter
ಚಂಡಿಗಢ: ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್ಸ್ಟರ್ ದೀಪಕ್ ಟಿನು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ರವಿವಾರ ತಿಳಿಸಿವೆ.
ಮಾನ್ಸಾ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಗೋಯಿಂದ್ವಾಲ್ ಸಾಹಿಬ್ ಜೈಲಿನಿಂದ ಪ್ರೊಡಕ್ಷನ್ ವಾರಂಟ್ ಮೇಲೆ ಕರೆತರುವಾಗ ಶನಿವಾರ ರಾತ್ರಿ ಪರಾರಿಯಾಗಿದ್ದ ಟಿನುವನ್ನು ಹಿಡಿಯಲು ಮಾನವ ಬೇಟೆಯನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಟಿನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆಪ್ತ ಸಹಾಯಕ, ಪಂಜಾಬಿ ಗಾಯಕ ಮೂಸೆವಾಲಾನ ಕೊಲೆ ಪ್ರಕರಣದ ಆರೋಪಿಯೂ ಆಗಿದ್ದಾನೆ.
ಮೇ 29 ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಎಂದು ಜನಪ್ರಿಯರಾಗಿರುವ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
Next Story





