ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಶಿಖರ್ ಧವನ್ ನಾಯಕ

Photo: twitter
ಹೊಸದಿಲ್ಲಿ, ಅ.2: ದಕ್ಷಿಣ ಆಫ್ರಿಕಾ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಮುಂಬರುವ 3 ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ರವಿವಾರ 16 ಸದಸ್ಯರನ್ನು ಒಳಗೊಂಡ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಟ್ವೆಂಟಿ-20 ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತದ ಆಟಗಾರರು ಏಕದಿನ ಸರಣಿಯಲ್ಲಿ ಆಡುವುದಿಲ್ಲ. ಆಸ್ಟ್ರೇಲಿಯದಲ್ಲಿ ನಡೆಯಲಿರುವ ವಿಶ್ವಕಪ್ಗೆ ಸಜ್ಜಾಗಲು ಆದಷ್ಟು ಬೇಗನೆ ಪರ್ತ್ಗೆ ತೆರಳಲಿದೆ.
ಇದೇ ವೇಳೆ ಭಾರತವು ಯುವ ಬ್ಯಾಟರ್ ರಜತ್ ಪಾಟಿದಾರ್ ಹಾಗೂ ವೇಗದ ಬೌಲರ್ ಮುಕೇಶ್ ಕುಮಾರ್ಗೆ ಇದೇ ಮೊದಲ ಬಾರಿ ಏಕದಿನ ತಂಡದಲ್ಲಿ ಸ್ಥಾನ ನೀಡಿದೆ. ಏಕದಿನ ಸರಣಿಯು ಲಕ್ನೋದಲ್ಲಿ ಅಕ್ಟೋಬರ್ 6ರಿಂದ ಆರಂಭವಾಗಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ
ಶಿಖರ್ ಧವನ್(ನಾಯಕ), ಶ್ರೇಯಸ್ ಅಯ್ಯರ್(ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್,ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವಿಕೆಟ್ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್ಕೀಪರ್), ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಅವೇಶ್ ಖಾನ್, ಮುಹಮ್ಮದ್ ಸಿರಾಜ್ ಹಾಗೂ ದೀಪಕ್ ಚಹಾರ್.