ಶವ ನೋಡಲು ಬರದಿದ್ದರೆ, ದ್ವೆವವಾಗಿ ಬರುವೆ: ಡೆತ್‍ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ
ರಾಯಚೂರು: ವಿದ್ಯಾರ್ಥಿನಿಯೊಬ್ಬಳು ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು ಡೆತ್‍ನೋಟ್ ಬರೆದು ತನ್ನ ಕೊನೆಯ ಆಸೆ ಈಡೇರಿಸುವಂತೆ ಉಲ್ಲೇಖಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಹತ್ತನೆ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಆದರೆ, ಆಕೆ ಸಾವಿಗೂ ಮುನ್ನ ನಾಲ್ಕು ಪುಟಗಳ ಡೆತ್‍ನೋಟ್ ಬರೆದಿದ್ದು, ಇದರಲ್ಲಿ, "ನನ್ನದು ಒಂದೇ ಆಸೆ ಇದ್ದು, ನನ್ನ ಶವ ನೋಡಲು ಎಲ್ಲರೂ ಬರಬೇಕು. ಇಲ್ಲದಿದ್ದರೆ, ನಾನು ದೆವ್ವ ಆಗಿ ಮರಳಿ ಬರುತ್ತೇನೆ" ಎಂದು ಉಲ್ಲೇಖಿಸಿದ್ದಾಳೆ.
ಜತೆಗೆ, ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ.
ಈ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
Next Story