Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣ ವ್ಯಾಪಾರವಲ್ಲ; ವ್ಯಕ್ತಿತ್ವ...

ಶಿಕ್ಷಣ ವ್ಯಾಪಾರವಲ್ಲ; ವ್ಯಕ್ತಿತ್ವ ನಿರ್ಮಾಣ ಸಾಧನ: ಸಚಿವ ಸುನಿಲ್ ಕುಮಾರ್‌

ಉಡುಪಿ ಜಿಲ್ಲೆಯ 31,679 ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ2 Oct 2022 7:51 PM IST
share
ಶಿಕ್ಷಣ ವ್ಯಾಪಾರವಲ್ಲ; ವ್ಯಕ್ತಿತ್ವ ನಿರ್ಮಾಣ ಸಾಧನ: ಸಚಿವ ಸುನಿಲ್ ಕುಮಾರ್‌

ಉಡುಪಿ, ಅ.2: ಶಿಕ್ಷಣವೆಂಬುದು ವ್ಯಾಪಾರವಲ್ಲ. ಅದು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣ ಮಾಡುವ ಸಾಧನ. ವ್ಯಕ್ತಿತ್ವ ನಿರ್ಮಿಸದ ಶಿಕ್ಷಣ, ಶಿಕ್ಷಣವೇ ಅಲ್ಲ ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಹೆಗ್ಗುಂಜೆ ರಾಜೇವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲೆಯ 350 ಸರಕಾರಿ ಮತ್ತು ಅನುದಾನಿತ ಪ್ರೌಢ, ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ 31,679 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಸಮವಸ್ತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಮವಸ್ತಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆಗಳ ಸಹಯೋಗದೊಂದಿಗೆ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಎಂಬುದು ಮಗುವಿನ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗಿದ್ದು, ಸಹಾಯ ಮಾಡಬೇಕು ಎಂದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳ ಅಭಿವೃದ್ಧಿ ಸರಕಾರಕ್ಕಿಂತ ಹೆಚ್ಚಾಗಿ ಸಹೃದಯಿ ದಾನಿಗಳ ನೆರವಿನಿಂದ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಎಚ್.ಎಸ್.ಶೆಟ್ಟಿ ಅಂಥವರು ತಮ್ಮ ಹುಟ್ಟೂರಿನ ಮಮಕಾರದಿಂದ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ವಿಶೇಷ ನೆರವು ನೀಡುತ್ತಿರುವುದು ಇಲ್ಲಿನ ಶಿಕ್ಷಣದ ಗುಣಮಟ್ಟ ಉಳಿದೆಡೆಗಳಿಗಿಂತ ಉನ್ನತ ಮಟ್ಟದಲ್ಲಿರಲು ಕಾರಣ ಎಂದರು.

ದೇಶದಲ್ಲಿ ಎಚ್.ಎಸ್.ಶೆಟ್ಟಿಯಂಥ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಬೇಕಿದೆ. ಇಂಥವರು ನವಭಾರತದ ಕನಸು ಕಾಣುತ್ತಿರುವ ಪ್ರಧಾನಿಯವರ ಆಶಯಗಳನ್ನು ನನಸು ಮಾಡಲು ಪೂರಕವಾಗುತ್ತಾರೆ ಎಂದು ಸುನಿಲ್‌ ಕುಮಾರ್ ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಂಗಳೂರಿನ ಬಹುಮುಖ ಪ್ರತಿಭೆಯ  ಕಲಾವಿದ ಹಾಗೂ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್,  ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಪೂರಕವಾಗುವ ಅಂಶ ಗಳ ಕಡೆಗೆ ಗಮನ ಸೆಳೆದು, ನಿಮ್ಮ ಭವಿಷ್ಯ ಉಜ್ವಲವಾಗಿದೆ. ಅದು ನಿಮ್ಮ ಕೈಯಲ್ಲಿದೆ.ಆದರೆ ಅದನ್ನು  ರೂಪಿಸಿ ಕೊಳ್ಳಬೇಕಾದವರು ನೀವೇ ಆಗಿದ್ದೀರಿ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ  ಲಾಲಾಜಿ ಆರ್.ಮೆಂಡನ್, ಬಿ.ಎಂ. ಸುಕುಮಾರ್ ಶೆಟ್ಟಿ, ಪಾಂಡಿಚೇರಿ ವಿವಿಯ  ಪ್ರಾಧ್ಯಾಪಕ ಹಾಗೂ ಡೀನ್ ಪ್ರೊ.ಹಾಲಾಡಿ ಪ್ರತಾಪ್‌ಕುಮಾರ್ ಶೆಟ್ಟಿ, ಜಿಪಂ ಸಿಇಓ ಪ್ರಸನ್ನ ಎಚ್., ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಕೆ.ಶಿವರಾಜ್, ಸೊಸೈಟಿಯ ಉಪಾಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷ ಎಚ್.ಎಸ್. ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಸಂಘಟನಾ ಕಾರ್ಯದರ್ಶಿ ರಾಜೀವ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕುಂದಾಪುರದ ಪತ್ರಕರ್ತ ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X