Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಚ್ಛೇ ದಿನದ ಅಸಲಿಯತ್ತಿನ ಬಗ್ಗೆ ದೊಡ್ಡ...

ಅಚ್ಛೇ ದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ : ಕುಮಾರಸ್ವಾಮಿ

RSS ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ

ವಾರ್ತಾಭಾರತಿವಾರ್ತಾಭಾರತಿ3 Oct 2022 12:13 PM IST
share
ಅಚ್ಛೇ ದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ : ಕುಮಾರಸ್ವಾಮಿ

ಬೆಂಗಳೂರು: BJPಯ ಮಾತೃಸಂಸ್ಥೆ RSSನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ನೀಡಿರುವ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗಿದ್ದು, ಆರ್ಥಿಕ ಸ್ಥಿತಿಗೆ RSS ಕಳವಳ ವ್ಯಕ್ತಪಡಿಸುವುದಾಗಿ RSS ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ʼಸ್ವಾವಲಂಬಿ ಭಾರತ ಅಭಿಯಾನʼ ಎಂಬ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು.

ದತ್ತಾತ್ರೇಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್‌ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಕಳೆದ 7 ವರ್ಷದ BJP ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ ? ಯಾರು ಹಾಳಾಗಿದ್ದಾರೆ ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? ಎಂದು ಪ್ರಶ್ನಿಸಿದ್ದಾರೆ.

23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ. ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ.20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ.

ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇ ದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ. 'ಕಾರ್ಪೋರೇಟ್ ರಾಜ್ಯ'ದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ. ಜನರ ಅಸಹನೆ, ಬೇಗುದಿ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರ BJP ಸರಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಿನಲ್ಲೂ ಭಾರತದ ಮೇಲೆ ಆರ್ಥಿಕ ಅಸಮಾನತೆಯ ಕಪ್ಪುಚುಕ್ಕೆ ಇದೆ. ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು 'ರಾಷ್ಟ್ರೀಯ ಅಪಮಾನ' ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಕಳೆದ 7 ವರ್ಷದ @BJP4India ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ? ಯಾರು ಹಾಳಾಗಿದ್ದಾರೆ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? 2/6 pic.twitter.com/bfO2ZaJW0u

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 3, 2022

ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ
ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ. 4/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 3, 2022

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಿನಲ್ಲೂ ಭಾರತದ ಮೇಲೆ ಆರ್ಥಿಕ ಅಸಮಾನತೆಯ ಕಪ್ಪುಚುಕ್ಕೆ ಇದೆ. ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು 'ರಾಷ್ಟ್ರೀಯ ಅಪಮಾನ' ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ. 6/6#ಆರ್ಥಿಕ_ಅಸಮಾನತೆ#ಬಡತನ #ನಿರುದ್ಯೋಗ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X