ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಟ್ವಿಟರ್ ಖಾತೆ ಹ್ಯಾಕ್

ಬೆಂಗಳೂರು, ಅ.3: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ.
ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಲು ಇಲಾಖೆ ಹೊಂದಿದ್ದ ಟ್ವಿಟರ್ ಖಾತೆಯನ್ನು ಎರಡು ದಿನಗಳ ಹಿಂದೆ ಹ್ಯಾಕ್ ಮಾಡಲಾಗಿದೆ. ಚಾಲನೆ ಇರುವ ಸಂದೇಶಗಳು ಅಸಂಬದ್ಧವಾಗಿ ಸರಣಿ ಟ್ವೀಟ್ ಮಾಡಲಾಗುತ್ತಿದೆ ಎಂದು ಅಧಿಕೃತ ಪ್ರಕಟನೆಹೊರಡಿಸಲಾಗಿದೆ.
ಸದ್ಯ ಖಾತೆ ಹ್ಯಾಕ್ ಆಗಿರುವುದನ್ನು ಗಮನಿಸಿರುವ ಇಲಾಖೆಯ ಡಿಜಿಟಲ್ ಕಮ್ಯುನಿಕೇಷನ್ ತಂಡ ಸೈಬರ್ ಕ್ರೈಂ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿವೊಬ್ಬರು ಮಾಹಿತಿ ನೀಡಿದರು.
Next Story