Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. PSI ನೇಮಕಾತಿ ಅಕ್ರಮ | ಬಂಧಿತ ಅಮೃತ್...

PSI ನೇಮಕಾತಿ ಅಕ್ರಮ | ಬಂಧಿತ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ5 Oct 2022 9:53 AM IST
share
PSI ನೇಮಕಾತಿ ಅಕ್ರಮ | ಬಂಧಿತ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು, ಅ.5: PSI ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಹಗರಣದ ತನಿಖೆಯನ್ನು ಈಗಾಗಲೇ CID ನಡೆಸುತ್ತಿದೆ. ಯತ್ನಾಳ್‌ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ CID ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಎಐಸಿಸಿ ಕಾರ್ಯದರ್ಶಿ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಅಧಿವೇಶನದಲ್ಲಿ PSI ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‌ಪಿನ್‌ ಎಕ್ಸ್‌ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ CBI ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ ಎಂದವರು ಆಗ್ರಹಿಸಿದ್ದಾರೆ.

ಯತ್ನಾಳ್ ಆರೋಪ ಗಮನಿಸಿದರೆ PSI ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‌ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ.? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ‌ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ CBI ತನಿಖೆಯಾಗಬೇಕು ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಿಸಿದ್ದಾರೆ.

PSI ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ BSY ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು BSY ಪುತ್ರನ ವಿರುದ್ಧವೇ.? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

PSI ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. CID ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉಡುಪಿ | ಪಿಸ್ತೂಲ್, ಕತ್ತಿ, ಚಾಕುಗಳನ್ನು ಇಟ್ಟು ಪ್ರಮೋದ್ ಮುತಾಲಿಕ್ ಆಯುಧ ಪೂಜೆ !

3
ಯತ್ನಾಳ್ ಆರೋಪ ಗಮನಿಸಿದರೆ PSI ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ.

ಈ ಹಗರಣದ ನಿಜವಾದ ಕಿಂಗ್‌ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ?

ಈ ಸತ್ಯ ಜನರಿಗೆ ಗೊತ್ತಾಗಬೇಕು.
ಆ ಸತ್ಯ ತಿಳಿಯಬೇಕಾದರೆ ಒಂದೋ‌ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ CBI ತನಿಖೆಯಾಗಬೇಕು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X