ಮಂಡ್ಯ: ಭಾರತ್ ಜೋಡೊ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ
ಮಂಡ್ಯ: 2 ದಿನ ವಿಶ್ರಾಂತಿ ಬಳಿಕ ಕರ್ನಾಟಕದಲ್ಲಿ 5ನೇ ದಿನದ ಭಾರತ್ ಜೋಡೋ ಯಾತ್ರೆ ಮತ್ತೆ ಇಂದಿನಿಂದ ಆರಂಭವಾಗಿದೆ.
ಮಂಡ್ಯದ ಬೆಳ್ಳಾಳೆಯಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು.
ಅ.3ರಂದೇ ರಾಜ್ಯಕ್ಕೆ ಬಂದಿದ್ದ ಸೋನಿಯಾ ಗಾಂಧಿ, ಎಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿಯ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ 2 ದಿನ ವಾಸ್ತವ್ಯ ಹೂಡಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.