Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟೇಶ್ವರ: ಪುಷ್ಕರಣಿ ನೀರು ಕಲುಷಿತ;...

ಕೋಟೇಶ್ವರ: ಪುಷ್ಕರಣಿ ನೀರು ಕಲುಷಿತ; ಮೀನುಗಳ ಮಾರಣಹೋಮ

ವಾರ್ತಾಭಾರತಿವಾರ್ತಾಭಾರತಿ6 Oct 2022 8:23 PM IST
share
ಕೋಟೇಶ್ವರ: ಪುಷ್ಕರಣಿ ನೀರು ಕಲುಷಿತ; ಮೀನುಗಳ ಮಾರಣಹೋಮ

ಕುಂದಾಪುರ, ಅ.6: ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕೋಟಿ ತೀರ್ಥ ಪುಷ್ಕರಣಿಯ ನೀರು ಕಲುಷಿತಗೊಂಡಿದ್ದು ಕೆಲವು ದಿನಗಳ ಅಂತರದಲ್ಲಿ ಹಲವು ಮೀನುಗಳು ಮೃತಪಟ್ಟಿವೆ. ಈ ಬಗ್ಗೆ ದೇವಸ್ಥಾನ ದವರು, ಸ್ಥಳೀಯಾಡಳಿತ ಹಾಗೂ ಸಂಬಂದಪಟ್ಟ ಇಲಾಖೆ ಸೂಕ್ತ ಕ್ರಮವಹಿಸಬೇಕೆಂದು ಸಾರ್ವ ಜನಿಕರು ಆಗ್ರಹಿಸಿದ್ದಾರೆ.

ಹಲವು ವರ್ಷಗಳ ಇತಿಹಾಸವಿರುವ ಕೋಟಿತೀರ್ಥ ಪುಷ್ಕರಣಿ ಸುಮಾರು 4 ಎಕರೆ ವಿಸ್ತೀರ್ಣ ಹೊಂದಿದ್ದು, ಈಶಾನ್ಯ ದಿಕ್ಕಿನಲ್ಲಿ ಕೊಳಚೆ ನೀರು ಹರಿದು ಬಂದು ಕೆರೆಯ ನೀರು ಕಲುಷಿತಗೊಳ್ಳುತ್ತಿದೆ. ಇದರಿಂದಾಗಿ ನೀರು ವಿಪರೀತ ದುರ್ವಾಸನೆ ಬೀರುತ್ತಿದೆ. ಇದರ ಪರಿಣಾಮ ಕೆರೆಯಲ್ಲಿರುವ ಮೀನುಗಳು ಸಾಯುತ್ತಿದ್ದು ಕೆರೆಯ ನೀರಿನ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಪದರದಂತೆ ಕಂಡುಬರುತ್ತಿದೆ.

ಪುಷ್ಕರಣಿ ಈಶಾನ್ಯ ಭಾಗದಲ್ಲಿ ಚರಂಡಿಯೊಂದು ಹರಿಯುತ್ತಿದ್ದು ಅಲ್ಲಿಗೆ ಕೆಲವು ಉದ್ಯಮದವರು ಕಲುಷಿತ ನೀರನ್ನು ಬಿಡುತ್ತಿದ್ದಾರೆಂದು ಆರೋಪಿಸಲಾಗಿದೆ. ಈ ಚರಂಡಿಯಲ್ಲಿ ನೀರು ತುಂಬಿ ದೇವಸ್ಥಾನದ ಕೆರೆ, ನೆರೆಹೊರೆಯ ಪರಿಸರ, ಕೃಷಿಭೂಮಿಗೂ ನೀರು ನುಗ್ಗುತ್ತಿವೆ. ಅಲ್ಲದೇ ಸಮೀಪದ ಹದಿನೈದಕ್ಕೂ ಅಧಿಕ ಮನೆಗಳ ಬಾವಿಯ ನೀರು ಹಾಳಾಗುತ್ತಿವೆ ಎಂದು ಸ್ಥಳೀಯರಿಂದ ಆರೋಪ ಕೇಳಿ ಬಂದಿದೆ.

ಈ ಪುಷ್ಕರಣಿಯ ನೀರಿನಿಂದ ದೇವರಿಗೆ ಪ್ರತಿನಿತ್ಯ ಅಭಿಷೇಕ ಮಾಡಲಾಗುತ್ತಿದೆ. ಅಲ್ಲದೆ ಬರುವ ಭಕ್ತರು ಕೂಡ ಸ್ನಾನ ಹಾಗೂ ತೀರ್ಥ ಪ್ರೋತ್ಸಾಹ ಮಾಡುವ ಸಂಪ್ರದಾಯ ಕೂಡ ಇದ್ದು ಇದೀಗ ನೀರು ಸಂಪೂರ್ಣ ಕಲುಷಿತವಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸ್ಥಳೀಯರು ಕೋಟೇಶ್ವರ ಗ್ರಾಪಂಗೆ ದೂರು ನೀಡಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಪಂನಿಂದ ಸ್ಥಳ ಪರಿಶೀಲನೆ

ಕೋಟಿತೀರ್ಥ ಪುಷ್ಕರಣಿ ಹಾಗೂ ಚರಂಡಿಯಲ್ಲಿ ಕಲುಷಿತ ನೀರು ಹರಿಯುವ ಸ್ಥಳಕ್ಕೆ ಕೋಟೇಶ್ವರ ಗ್ರಾಪಂ ಅಧ್ಯಕ್ಷ ಕೃಷ್ಣಗೊಲ್ಲ, ಅಭಿವೃದ್ಧಿ ಅಧಿಕಾರಿ ದಿನೇಶ್ ನಾಯ್ಕ್, ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ, ಸುರೇಶ್ ದೇವಾಡಿಗ, ರಾಯ್ಸನ್ ಡಿಮೆಲ್ಲೂ, ರಾಜು ಮರಕಾಲ ಮತ್ತಿತ್ತರರು  ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ಪ್ರಮುಖರಾದ ಸುಧೀರ್ ಕುಮಾರ್ ಶೆಟ್ಟಿ ಮಾರ್ಕೋಡು, ಸುರೇಶ್ ಕಾಮತ್, ಜಗನ್ನಾಥ್ ಭಟ್, ಡಾ.ಕೆ.ಸೋಮಶೇಖರ ಉಡುಪ ಮೊದಲಾದವರು ಮಾಹಿತಿ ನೀಡಿದರು.

"ಕೆರೆ ನೀರು ಕಲುಷಿತಗೊಂಡು ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ಸ್ಥಳೀಯ ರಿಂದ ಗ್ರಾಪಂಗೆ ದೂರು ಬಂದಿದೆ. ದೂರಿನಲ್ಲಿ ಸ್ಥಳೀಯ ರೈಸ್ ಮಿಲ್ ನೀರು ಚರಂಡಿಗೆ ಬೀಡಲಾಗುತ್ತಿದೆ ಎಂಬ ದೂರುಗಳಿವೆ. ಆ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ್ದಲ್ಲದೆ ಸಂಬಂಧಪಟ್ಟವರನ್ನು ಕರೆಸಿ ಮಾಹಿತಿ ಪಡೆಯ ಲಾಗಿದ್ದು ಅವರು ತಮ್ಮ ಸಮಸ್ಯೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೆರೆಯನ್ನು ನೀರನ್ನು ಹೆಚ್ಚಿನ ಮಾಹಿತಿಗಾಗಿ ಪ್ರಯೋಗಲಾಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು".
-ಕೃಷ್ಣ ಗೊಲ್ಲ, ಅಧ್ಯಕ್ಷರು, ಕೋಟೇಶ್ವರ ಗ್ರಾಪಂ

"ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪ್ರಸಿದ್ಧ ಕೋಟಿತೀರ್ಥ ಪುಷ್ಕರಣಿ ಇಂದು ಕಲುಷಿತವಾಗಿ ಜಲಚರಗಳು ಸಾಯುತ್ತಿರುವುದು ದುರಂತ. ಮಾನವನ ಬೇಜವಾಬ್ದಾರಿತನಕ್ಕೆ ಸಿಕ್ಕಿ ಆರೋಗ್ಯವೇ ಭಾಗ್ಯ ಎಂಬ ಪರಿಕಲ್ಪನೆ ಹಾದಿ ತಪ್ಪುತ್ತಿದೆ. ನಮ್ಮ ಮನೆ ಸಹಿತ ಅಕ್ಕಪಕ್ಕದ ಮನೆಗಳ ಬಾವಿ ನೀರು ಕಲುಷಿತಗೊಂಡಿದ್ದು ಇದೆಲ್ಲ ಸರಿಯಾಗಲು ಹಲವು ವರ್ಷಗಳೇ ಬೇಕಾಗಬಹುದು. ತಕ್ಷಣ ಸಂಬಂಧಪಟ್ಟವರು ಸೂಕ್ತ ಕ್ರಮವಹಿಸಬೇಕು.
-ಡಾ.ಕೆ.ಸೋಮಶೇಖರ್ ಉಡುಪ, ಸ್ಥಳೀಯರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X