ಮಂಗಳೂರು: ಚಿನ್ನ ಅಕ್ರಮ ಸಾಗಾಟ ಪತ್ತೆ; ಆರೋಪಿ ವಶಕ್ಕೆ
ಮಂಗಳೂರು, ಅ. 6: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38,53,200 ರೂ. ಮೌಲ್ಯದ 741 ಗ್ರಾಂ ಅಕ್ರಮ ಸಾಗಾಟದ 24 ಕ್ಯಾರಟ್ ಪರಿಶುದ್ಧ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಪತ್ತೆ ಮಾಡಿದ್ದಾರೆ.
ದುಬೈಯಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಸಿದ ಕಾಸರಗೋಡು ನಿವಾಸಿ ಚಿನ್ನದ ಪೌಡರನ್ನು ಗಮ್ನಲ್ಲಿ ಮಿಕ್ಸ್ ಮಾಡಿ ಅದನ್ನು ಉಂಡೆ ಮಾಡಿ ಗುದದ್ವಾರದೊಳಗಿಟ್ಟು ಸಾಗಾಟ ಮಾಡಿದ್ದ ಎಂದು ತಿಳಿದುಬಂದಿದೆ.
ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಚಿನ್ನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story