Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿರಿಸಿದ...

ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿರಿಸಿದ ಅನುದಾನ ದುರುಪಯೋಗ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೇತೃತ್ವದ ಸಮಿತಿ ಆರೋಪ

ಜಿ.ಮಹಾಂತೇಶ್ಜಿ.ಮಹಾಂತೇಶ್7 Oct 2022 8:47 AM IST
share
ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿರಿಸಿದ ಅನುದಾನ ದುರುಪಯೋಗ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೇತೃತ್ವದ ಸಮಿತಿ ಆರೋಪ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಉಪಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ  ಜಾನುವಾರು, ಮನೆ ನಿರ್ಮಾಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಳಕೆ ಮಾಡದೆಯೇ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಅದೇ ರೀತಿ ಕೃಷಿ ವಿಶ್ವವಿದ್ಯಾನಿಲಯಗಳು ಸೇರಿದಂತೆ ಇನ್ನಿತರ ಬಹುತೇಕ ವಿಶ್ವವಿದ್ಯಾನಿಲಯಗಳು ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷರಾಗಿರುವ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಆರೋಪಿಸಿದೆ.

2021-22ನೇ ಸಾಲಿಗೆ ಸಂಬಂಧಿಸಿದಂತೆ ಸಮಿತಿಯು ವಿಧಾನಮಂಡಲಕ್ಕೆ 2022ರ ಸೆ.21ರಂದು ಸಲ್ಲಿಸಿರುವ ಐದನೇ ವರದಿಯಲ್ಲಿ ಇಲಾಖೆಯು ಹೇಗೆ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ವಿವರಿಸಿದೆ.

ಪರಿಶಿಷ್ಟರ ಕಲ್ಯಾಣಕ್ಕೆ ಸಾವಿರಾರು ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಸರಕಾರವು ಇತ್ತೀಚೆಗಷ್ಟೇ ಜಾಹೀರಾತು ನೀಡುವ ಮೂಲಕ ಹೆಮ್ಮೆಯಿಂದ ಬೀಗಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷರಾಗಿರುವ ಸಮಿತಿಯು ಸಲ್ಲಿಸಿರುವ ವರದಿಯು ಸರಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಂತಾಗಿದೆ.

‘ಇಲಾಖೆಯು ಎಸ್ಸಿಪಿ ಮತ್ತು ಟಿಎಸ್ಪಿ ಅಡಿಯಲ್ಲಿ ನಿಗದಿಯಾಗಿರುವ ಅನುದಾನದಲ್ಲಿ ರಾಸುಗಳನ್ನು ಕೊಡುವುದು ಅಥವಾ ಮನೆಗಳನ್ನು ಕಟ್ಟಿಸುವುದು ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಬಳಕೆ ಮಾಡದಿರುವುದು, ರೈತರ ಅರ್ಥಿಕ ವ್ಯವಸ್ಥೆಯನ್ನು ಸುಧಾರಣೆ ಮಾಡುವ ಬದಲಾಗಿ 5 ರೂ.ಗಳ ಇನ್ಸೆಂಟಿವ್ ನೀಡುತ್ತಿರುವುದು ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ನಿರ್ವಹಣೆ ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ದಾರಿತಪ್ಪಿಸುವಂತಹ ಕೆಲಸವಾಗುತ್ತಿದೆ,’ ಎಂದು ಸಮಿತಿಯು ಅಸಮಾಧಾನ ವ್ಯಕ್ತಪಡಿಸಿದೆ.

ಪರಿಶಿಷ್ಟ ಜಾತಿಯಲ್ಲಿ  2.71 ಲಕ್ಷ ಫಲಾನುಭವಿಗಳಿದ್ದಾರೆ. ಎಸ್ಸಿಪಿ ಮತ್ತು ಟಿಎಸ್ಪಿ  ಯೋಜನೆಯಡಿಯಲ್ಲಿ ಇಷ್ಟೂ ಸಂಖ್ಯೆಯಲ್ಲಿರುವ ಫಲಾನುಭವಿಗಳಿಗೆ ರಾಸುಗಳನ್ನು ಹಂಚಿಕೆ ಮಾಡಬೇಕಿತ್ತು. ಇದರಿಂದ ಮಹಿಳಾ ರೈತರು ಹಾಲು ಮಾರಾಟ ಮಾಡುವುದನ್ನು ಉತ್ತೇಜಿಸಬಹುದಿತ್ತು. ಆದರೆ ಈ ಯೋಜನೆಯಡಿಯಲ್ಲಿನ ಅನುದಾನವನ್ನು ಬಳಕೆ ಮಾಡದೆಯೇ ಉಳಿಕೆಯಾಗಿರುವ 248 ಲಕ್ಷ ರೂ.ಗಳನ್ನು ಬಳಸಿಕೊಂಡಿಲ್ಲ. ಬದಲಿಗೆ ಈ ಹಣವನ್ನು ಆಡಳಿತ ಭವನ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ ಎಂದು ಸಮಿತಿಯು ಆಕ್ಷೇಪಿಸಿದೆ.

ಅದೇ ರೀತಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಮೀಸಲಾತಿ ಕ್ಷೇತ್ರಗಳಾದ ಕೋಲಾರ, ಚಾಮರಾಜನಗರ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಗಮನವನ್ನು ಹರಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಕೃಷಿ ವಿಶ್ವವಿದ್ಯಾನಿಲಯ ಸೇರಿದಂತೆ ಇನ್ನಿತರ ಸಾಂಪ್ರದಾಯಿಕ ಸ್ವರೂಪದ ಬಹುತೇಕ ವಿಶ್ವವಿದ್ಯಾನಿಲಯಗಳು ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಆಪಾದಿಸಿರುವ ಸಮಿತಿಯು ಅನುದಾನ ದುರ್ಬಳಕೆ ಮಾಡಿಕೊಂಡ ವಿಶ್ವವಿದ್ಯಾನಿಲಯಗಳ ಅಧಿಕಾರಿ, ನೌಕರರ ವಿರುದ್ಧ ಯಾವುದೇ ಕ್ರಮವಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ವರದಿಯಿಂದ ತಿಳಿದು ಬಂದಿದೆ.  ಅನುದಾನ ದುರುಪಯೋಗಪಡಿಸಿಕೊಂಡಿರುವ ವಿವಿಗಳ ಅಧಿಕಾರಿ, ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ರ ನಿಯಮ 4ರ ಅಡಿ ಜೈಲು ಶಿಕ್ಷೆ ದಂಡನೆ ವಿಧಿಸಬೇಕು ಮತ್ತು ಈ ನಿಟ್ಟಿನಲ್ಲಿ ಕೈಗೊಂಡ ಕ್ರಮದ ಕುರಿತ ಸಂಪೂರ್ಣ ವರದಿಯನ್ನು ನಿಗದಿತ ಅವಧಿಯಲ್ಲಿ ಒದಗಿಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ.

 2019-20, 2020-21, 2021-22 ನೇ ಸಾಲಿನಲ್ಲಿ ಉಪಯೋಜನೆಯಡಿಯಲ್ಲಿ ಬಿಡುಗಡೆ ಮಾಡಿದ್ದ ಒಟ್ಟು ಅನುದಾನದಲ್ಲಿ 9.35 ಕೋಟಿ ರೂ.ಗಳನ್ನು ವಿಶ್ವವಿದ್ಯಾನಿಲಯಗಳು ಬಳಕೆ ಮಾಡಿಕೊಂಡಿಲ್ಲ ಎಂಬುದು ವರದಿಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X