ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ
![ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ](https://www.varthabharati.in/sites/default/files/images/articles/2022/10/7/352090-1665123878.jpg)
ಜಬ್ಬಾರ್ ಖಾನ್ ಹೊನ್ನಳ್ಳಿ
ಹುಬ್ಬಳ್ಳಿ, ಅ. 7: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ (80) ಅವರು ಶುಕ್ರವಾರ ಮುಂಜಾನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ.
ಜಬ್ಬಾರ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story