ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು, ಅ.7: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯಿತು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆ.ಡಿ.ಎಸ್. ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಆರ್.ಅಶೋಕ್, ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ವಿಧಾನಸಭಾ ವಿಪಕ್ಷ ಉಪನಾಯಕ, ಶಾಸಕರಾದ ಯು.ಟಿ. ಖಾದರ್, ಜೆ.ಡಿ.ಎಸ್.ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ಅಜಯ್ ಧರ್ಮ ಸಿಂಗ್, ಮಾಜಿ ಶಾಸಕ ವಿ.ಎಸ್. ಉಗ್ರಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.






.jpeg)
.jpeg)
.jpeg)


