ಬೆಳಗಾವಿಯಲ್ಲಿ ಜೋಡಿ ಕೊಲೆ ಪ್ರಕರಣ: ಇಬ್ಬರು ಪೊಲೀಸ್ ಕಾನ್ಸ್ಟೆಬಲ್ ಅಮಾನತು
ಬೆಳಗಾವಿ: ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ಮಹೇಶ ರಾಮಚಂದ್ರ ಮುರಾರಿ (26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ್(24) ಎಂಬ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿತ್ತು.
ಇತ್ತ ಸುಳೇಭಾವಿ ಗ್ರಾಮದ ಬೀಟ್ ಪೊಲೀಸರಾಗಿದ್ದ ಹೆಡ್ ಕಾನ್ಸ್ಟೆಬಲ್ ಬಿ.ಎನ್. ಬಳಗಣ್ಣವರ ಮತ್ತು ಆರ್.ಎಸ್. ತಳೇವಾಡ ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಿ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಹತ್ಯೆ
Next Story