ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತರಿಂದಲೇ ಯುವಕನ ಹತ್ಯೆ
ಕಲಬುರಗಿ: ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಟಕಲ್ ಪೊಲೀಸ ಠಾಣೆ ವ್ಯಾಪ್ತಿಯ ಕೊಟ್ಗಾ ಗ್ರಾಮದಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದ ಮೋಹನ್ (20) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರು ಸೇರಿ ಹತ್ಯೆ ಮಾಡಿದ್ದಾರೆನ್ನಲಾಗಿದೆ. ಸದ್ಯ ಆರೋಪಿಗಳಾದ ಆನಂದ್ ಮತ್ತು ಭೀಮಾ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Next Story