ಅ.9: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಕ್ರೀಡಾಕೂಟ

ಮಂಗಳೂರು, ಅ.8: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ವತಿಯಿಂದ ಅ.9ರಂದು ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಕ್ರೀಡಾಕೂಟವು ನಗರದ ಸಂತ ಅಲೋಶಿಯಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಅ.9ರಂದು ಬೆ.10ರಿಂದ ಸಂಜೆ 5ರವರೆಗೆ ಕಾಲೇಜು ಸೆಂಟಿನರಿ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟವನ್ನು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





