Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೂದಾನ ಆಂದೋಲನ ವಿನೋಬಾ ಭಾವೆಯ ಅನನ್ಯ...

ಭೂದಾನ ಆಂದೋಲನ ವಿನೋಬಾ ಭಾವೆಯ ಅನನ್ಯ ಕೊಡುಗೆ: ವಿಷಂಬರನಾಥ್ ಅಗರ್ವಾಲ

ವಾರ್ತಾಭಾರತಿವಾರ್ತಾಭಾರತಿ8 Oct 2022 7:13 PM IST
share
ಭೂದಾನ ಆಂದೋಲನ ವಿನೋಬಾ ಭಾವೆಯ ಅನನ್ಯ ಕೊಡುಗೆ: ವಿಷಂಬರನಾಥ್ ಅಗರ್ವಾಲ

ಮಣಿಪಾಲ, ಅ.8: ಆಚಾರ್ಯ ವಿನೋಬಾ ಭಾವೆಯವರು ಪ್ರಾರಂಭಿಸಿದ ಭೂದಾನ ಆಂದೋಲನ ದೇಶಕ್ಕೆ ಅವರ ಒಂದು ಅನನ್ಯ ಕೊಡುಗೆ. ಇದರ ತತ್ವ ಮತ್ತು ಕಾರ್ಯ ನಿಜವಾದ ಅರ್ಥದಲ್ಲಿ ಗಾಂಧಿವಾದದ ಮೇಲೆ ನಿಂತಿದೆ ಎಂದು ಖ್ಯಾತ ವಿದ್ವಾಂಸ ವಿಷಂಬರನಾಥ್ ಅಗರ್ವಾಲ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್(ಜಿಸಿಪಿಎಎಸ್) ಆಶ್ರಯದಲ್ಲಿ ಆಚಾರ್ಯ ವಿನೋಬಾ ಭಾವೆ ಕುರಿತು ಇಂದು ಮಣಿಪಾಲದ ಹಳೆಯ ಟ್ಯಾಪ್ಮಿ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ ವಿನೋಬಾ ಭಾವೆ ಜೀವನ ಮತ್ತು ತತ್ವ’ ಎಂಬ ವಿಷಯದ ಕುರಿತು ಮಾತನಾಡುತಿದ್ದರು.

ಸ್ವಯಂಪ್ರೇರಿತವಾಗಿ ಭೂಮಿ ಅಥವಾ ಹಣವನ್ನು ದಾನ ಮಾಡುವುದು ಹೆಚ್ಚು ಮಾನವೀಯ ಸಮಾಜವನ್ನು ರೂಪಿಸುವತ್ತ ನಿಜವಾದ ಗಾಂಧಿತತ್ವದ ಹೆಜ್ಜೆಯಾಗಿದೆ. ಮತ್ತು ವಿನೋಬಾ ಅವರ ಭೂದಾನ ಚಳುವಳಿ ಅಂತಹ ಪ್ರಯತ್ನಕ್ಕೊಂದು ಶ್ರೇಷ್ಠ ಉದಾಹರಣೆಯಾಗಿದೆ ಎಂದು ಐಐಟಿ ಮುಂಬಯಿಂದ  ಇಂಜಿನಿಯರಿಂಗ್ ಪದವಿ ಪಡೆದಿ ರುವ ವಿಷಂಭರನಾಥ್ ಅಗರ್ವಾಲ್ ನುಡಿದರು.

ತಾತ್ವಿಕವಾಗಿ ವಿನೋಬಾ ಅವರು ‘ಶಂಕರ, ಗಾಂಧಿ ಮತ್ತು ಕ್ರಿಸ್ತನ’ ಯೋಜನೆಗಳ ಸಂಯೋಜನೆಯನ್ನು ಪ್ರತಿನಿಧಿಸಿದ್ದರು. ಕುರಾನ್ ಧರ್ಮಗ್ರಂಥವನ್ನು ಮೂಲದಲ್ಲೇ ಓದುವ ಸಲುವಾಗಿ ಅವರು ಅರೇಬಿಕ್ ಭಾಷೆಯನ್ನು ಕಲಿತಿದ್ದರು. ಅವರು ಎಲ್ಲಾ ಧರ್ಮಗಳ ಸಾರವನ್ನು ಅರಿಯಲು ಪ್ರಯತ್ನಿಸಿದ್ದರು ಎಂದರು.

ಧರ್ಮ ಮತ್ತು ದೇಶದ ಸೀಮೆಯನ್ನು ದಾಟಿ ಜಗತ್ತಿನ ಕಲ್ಯಾಣ ಎಂಬರ್ಥದ ‘ಜೈ ಜಗತ್’ ಘೋಷಣೆಗೆ ಅವರು ಒತ್ತು ನೀಡಿದ್ದರು ಎಂದು ವಿಷಂಭರನಾಥ್ ಅಗರ್ವಾಲ್ ವಿವರಿಸಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಫಿಲಾಸಪಿ ಕ್ಲಬ್‌ನ ಸಂಯೋಜಕರಾದ ಮಲ್ಲೆಂ ಡೆಸ್ಮಂಡ್ ಡಾಸ್ ಹಾಗೂ ಯಶಸ್ವಿನಿ ಜಿ. ಕಾರ್ಯಕ್ರಮ ಸಂಯೋಜಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಕೆ.ಪಿ.ರಾವ್, ಡಾ.ಪ್ರಭಾಕರ ಶಾಸ್ತ್ರಿ, ಸುಬ್ರಹ್ಮಣ್ಯ ಬಾಸ್ರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X