ಬೆಂಗ್ರೆ: ಅಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ
ಮಂಗಳೂರು, ಅ.8: ದ.ಕ.ಜಿಲ್ಲಾ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ನಗರ ಪ್ರಾಥಮಿಕ ಅರೋಗ್ಯ ಕೇಂದ್ರ ಬೆಂಗ್ರೆ ಇದರ ಜಂಟಿ ಆಶ್ರಯದಲ್ಲಿ ಬೆಂಗ್ರೆ ವಾರ್ಡ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯುಷ್ಮಾನ್ ಭಾರತ್ ಅರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು.
ಮಾಜಿ ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಮ್, ಕಾರ್ಪೊರೇಟರ್ ಅಬ್ದುಲ್ ಲತೀಫ್, ಬೆಂಗ್ರೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಅಬೂಬಕರ್, ಅರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ. ಸೌದಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ.ಸುಧೀರ್, ಬೆಂಗ್ರೆ ವಾರ್ಡ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆಸೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ, ರಫೀಕ್ ಉಪಸ್ಥಿತರಿದ್ದರು.
Next Story