Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಸ್ತ್ರಚಿಕಿತ್ಸೆ ವೇಳೆ ಹೊಟ್ಟೆಯಲ್ಲೇ...

ಶಸ್ತ್ರಚಿಕಿತ್ಸೆ ವೇಳೆ ಹೊಟ್ಟೆಯಲ್ಲೇ ಚಿಮುಟ ಬಿಟ್ಟ ವೈದ್ಯ : ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 Oct 2022 8:22 AM IST
share
ಶಸ್ತ್ರಚಿಕಿತ್ಸೆ ವೇಳೆ ಹೊಟ್ಟೆಯಲ್ಲೇ ಚಿಮುಟ ಬಿಟ್ಟ ವೈದ್ಯ : ಪ್ರಕರಣ ದಾಖಲು

ತಿರುವನಂತಪುರ,ಅ.9: ಐದು ವರ್ಷಗಳ ಹಿಂದೆ ತನಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿದಾಗ ಫೋರ್ಸೆಪ್ಸ್ (ವೈದ್ಯರು ಬಳಸುವ ಇಕ್ಕಳ) ಅನ್ನು ತನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಕ್ಕಾಗಿ ವೈದ್ಯರ ವಿರುದ್ಧ ಹರ್ಷಿನಾ ಎಂಬ ಮಹಿಳೆ ಕೋಝಿಕೋಡ್‌ನಲ್ಲಿ ದೂರು ದಾಖಲಿಸಿದ ಬಳಿಕ ಈ ಬಗ್ಗೆ ತನಿಖೆಗೆ ಆದೇಶಿಸಿರುವ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು,ಶೀಘ್ರ ವರದಿಯನ್ನು ಸಲ್ಲಿಸುವಂತೆ ಆರೋಗ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಈ ಯಡವಟ್ಟಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಜಾರ್ಜ್ ತಿಳಿಸಿದ್ದಾರೆ.ನವಂಬರ್ 2017ರಲ್ಲಿ ಹರ್ಷಿನಾ ಕೋಝಿಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮೊದಲಿನ ಎರಡು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳು ಖಾಸಗಿ ಆಸ್ಪತ್ರೆಗಳಲ್ಲಿ ನಡೆದಿದ್ದವು.

ಮೂರನೇ ಸಿಸೇರಿಯನ್ ಬಳಿಕ ತೀವ್ರ ನೋವುಂಟಾಗುತ್ತಿತ್ತು. ಮೂತ್ರಪಿಂಡ ಕಲ್ಲುಗಳು ಅಥವಾ ಕ್ಯಾನ್ಸರ್ ಆಗಿರಬಹುದು ಎಂದು ತಾನು ಭಾವಿಸಿದ್ದೆ. ಪ್ರಬಲ ಆ್ಯಂಟಿಬಯಾಟಿಕ್‌ಗಳ ಸೇವನೆಯಿಂದ ನೋವು ಕಡಿಮೆಯಾಗಿದ್ದರೂ ಕಳೆದ ಆರು ತಿಂಗಳುಗಳಿಂದ ಮೂತ್ರ ಸೋಂಕಿನಿಂದ ಬಳಲುತ್ತಿದ್ದರಿಂದ ನೋವು ಸಹಿಸಲಸಾಧ್ಯವಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಸಿಟಿ ಸ್ಕಾನ್ ಮಾಡಿಸಿದಾಗ ಹೊಟ್ಟೆಯಲ್ಲಿ ಲೋಹದ ವಸ್ತುವಿದ್ದುದು ಮತ್ತು ಅದು ಮೂತ್ರಕೋಶಕ್ಕೆ ನುಗ್ಗಿ ಸೋಂಕನ್ನುಂಟು ಮಾಡಿದ್ದು ಪತ್ತೆಯಾಗಿತ್ತು. 

ಕೋಝಿಕೋಡ್ ಮೆಡಿಕಲ್ ಆಸ್ಪತ್ರೆಗೆ ಭೇಟಿ ನೀಡಿದ್ದು,ಕೊನೆಗೂ ಸೆ.17ರಂದು ವೈದ್ಯರು ತನ್ನ ಹೊಟ್ಟೆಯಲ್ಲಿದ್ದ ಫೋರ್ಸೆಪ್ಸ್ ಹೊರಕ್ಕೆ ತೆಗೆದಿದ್ದಾರೆ ಎಂದು ಹರ್ಷಿನಾ ದೂರಿನಲ್ಲಿ ತಿಳಿಸಿದ್ದಾರೆ.’ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಕೂಡ ಈ ಬಗ್ಗೆ ವಿಚಾರಣೆಗೆ ಆದೇಶಿಸಿದೆ.ಈ ಬಗ್ಗೆ ತಾವು ಪ್ರಾಥಮಿಕ ತನಿಖೆಯನ್ನು ನಡೆಸಿದ್ದು,ಯಾವುದೇ ಶಸ್ತ್ರಚಿಕಿತ್ಸಾ ಉಪಕರಣ ನಾಪತ್ತೆಯಾಗಿರಲಿಲ್ಲ ಎನ್ನುವುದು ಕಂಡು ಬಂದಿದೆ ಎಂದು ಹೇಳಿರುವ ಕಾಲೇಜಿನ ಪ್ರಾಂಶುಪಾಲ ಡಾ.ಇ.ವಿ.ಗೋಪಿ ಅವರು,ಮಹಿಳೆ ಮೊದಲು ಎರಡು ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು ಎಂದು ಬೆಟ್ಟು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X