ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ
ಮಹರ್ಷಿ ವಾಲ್ಮೀಕಿ ಜಯಂತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಾಸಕರ ಭವನದ ಆವರಣದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಗುಚ್ಚ ಅರ್ಪಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಈ ಸಂದರ್ಭ ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ ಶ್ರೀಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




.jpeg)
.jpeg)

.jpeg)


