ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ, ಅ.9: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆ ಅಥವಾ ಯುವತಿಯ ಮೃತದೇಹ ಇದಾಗಿದೆ.
ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
Next Story