ವಾಮಂಜೂರು: ಶಾರದೋತ್ಸವದ ಬ್ಯಾನರ್ ಹರಿದ ಕಿಡಿಗೇಡಿಗಳು

ಮಂಗಳೂರು: ನಗರ ಹೊರವಲಯದ ವಾಮಂಜೂರಿನಲ್ಲಿ ಹಾಕಲಾಗಿದ್ದ ಶಾರದೋತ್ಸವ ಮತ್ತು ಫ್ರೆಂಡ್ಸ್ ಹುಲಿಯ ಪ್ರಚಾರಾರ್ಥವಾಗಿ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಹರಿದು ಹಾಕಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ರಾತ್ರಿ ಸುಮಾರು 1:30ರಿಂದ 2ರ ವೇಳೆಗೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನದ ಭಾಗ ಇದಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಯುವಕರ ತಂಡವೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ವಾಮಂಜೂರು ಹುಲಿ ತಂಡದಿಂದ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
ಸಮಾಜದ ಸ್ವಾಸ್ಥ್ಯವನ್ನು ಕೆಡಿಸಲು ಕಿಡಿಗೇಡಿಗಳು ನಡೆಸಿದ ಪ್ರಯತ್ನ ಇದಾಗಿದೆ. ಈ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೆಲವರ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸರು ಸಿಸಿ ಕ್ಯಾಮರಾದ ದೃಶ್ಯಾವಳಿಯ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಸಮಾಜದಲ್ಲಿ ಶಾಂತಿ ಕದಡುವ ಈ ಕೃತ್ಯವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹುಲಿತಂಡದ ಪ್ರಮುಖರು ಪ್ರತಿಕ್ರಿಯಿಸಿದ್ದಾರೆ.
Next Story





