ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.9: ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಬೆಳಗ್ಗೆ 8.30ರ ತನಕ ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಆ ಬಳಿಕ ರಾಜ್ಯದಲ್ಲಿ ಭಾರಿ ಮಳೆ ಇನ್ನಷ್ಟು ವಿಸ್ತರಿಸಲಿದ್ದು, ಈ ಜಿಲ್ಲೆಗಳ ಜತೆಗೆ ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Next Story





