ಒಡೆಯರ್ ಎಕ್ಸ್ ಪ್ರೆಸ್ ನಾಮಕರಣ ಸ್ವಾಗತಾರ್ಹ: ಯದುವೀರ್ ಕೃಷ್ಣದತ್ತ ಒಡೆಯರ್

ಯದುವೀರ್ ಕೃಷ್ಣದತ್ತ ಒಡೆಯರ್
ಮೈಸೂರು:ಟಿಪ್ಪು ಎಕ್ಸ್ಪ್ರೆಸ್ ಮರು ನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಚಾಮುಂಡಿ ಬೆಟ್ಟದಲಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಟಿಪ್ಪು ಎಕ್ಸ್ಪ್ರೆಸ್ ಮರು ನಾಮಕರಣದ ಕುರಿತ ಸರಕಾರದ ನಿರ್ಧಾರ ಸ್ವಾಗತಾರ್ಹ. ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷ ಎಂದಿದ್ದಾರೆ.
Next Story





