ಮರೋಳಿ: ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಯುವ ದಂಪತಿಯ ಮೃತದೇಹಗಳು ಪತ್ತೆ
ನಗರದ ಮರೋಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸ್ತವ್ಯವಿದ್ದ ಯುವ ದಂಪತಿಯ ಮೃತದೇಹಗಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ (Suicide) ಸ್ಥಿತಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿವೆ.
ಮೃತರನ್ನು ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಬಿಕರ್ನಕಟ್ಟೆ ನಿವಾಸಿ ಸೌಮ್ಯಾ ನಾಯಕ್ (35) ಎಂದು ಗುರುತಿಸಲಾಗಿದೆ.
ಒಂದೂವರೆ ವರ್ಷದ ಹಿಂದೆ ಇವರು ಮದುವೆಯಾಗಿದ್ದರು. ಮಲ್ಲಿಕಾರ್ಜುನ ಗ್ರಾಫಿಕ್ ಡಿಸೈನರ್ ಆಗಿದ್ದರೆ, ಸೌಮ್ಯಾ ತಾತ್ಕಾಲಿಕ ನೆಲೆಯಲ್ಲಿ ಕೆಪಿಟಿಯಲ್ಲಿ ಶಿಕ್ಷಕಿಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ದಂಪತಿ ಎರಡು ದಿನಗಳ ಹಿಂದೆ ಮಡಿಕೇರಿಗೆ ಪ್ರವಾಸ ಹೋಗಿದ್ದು ರವಿವಾರ ಮಂಗಳೂರಿಗೆ ವಾಪಸ್ ಆಗಿದ್ದರು.
ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story