ಅಮೆರಿಕದ ಮೂವರಿಗೆ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ

Photo: Twitter/@NobelPrize
ಸ್ಟಾಕ್ಹೋಮ್: ಆರ್ಥಿಕತೆಯಲ್ಲಿ ಬ್ಯಾಂಕ್ಗಳ ಪಾತ್ರವನ್ನು ವಿವರಿಸಲು ನೀಡಿದ ಕೊಡುಗೆಗಾಗಿ ಅಮೆರಿಕದ ಮೂವರಿಗೆ ಸೋಮವಾರ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ ದೊರಕಿದೆ.
ಬೆನ್ ಬೆರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್ ಅವರು, "ಆರ್ಥಿಕತೆಯಲ್ಲಿ ಬ್ಯಾಂಕುಗಳ ಪಾತ್ರದ ಬಗ್ಗೆ ನಮ್ಮ ತಿಳುವಳಿಕೆಯನ್ನು ಗಮನಾರ್ಹವಾಗಿ ಸುಧಾರಿಸಿದ್ದಾರೆ, ವಿಶೇಷವಾಗಿ ಹಣಕಾಸಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಹಣಕಾಸು ಮಾರುಕಟ್ಟೆಗಳನ್ನು ಹೇಗೆ ನಿಯಂತ್ರಿಸಬೇಕು" ಎಂಬ ಬಗ್ಗೆ ವಿವರಿಸಿದ್ದಾರೆ ಎಂದು ಆಯ್ಕೆ ಸಮಿತಿಯು ಪ್ರಶಂಸಿಸಿದೆ.
Next Story