ಮೆಸ್ಕಾಂ ಫೋನ್ ಇನ್ ಕಾರ್ಯಕ್ರಮ

ಉಡುಪಿ, ಅ.11: ಮೆಸ್ಕಾಂ ಇಲಾಖೆಯ ವತಿಯಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಅನುಕೂಲಕ್ಕಾಗಿ ಅ.15ರಂದು ಅಪರಾಹ್ನ 3:30ರಿಂದ 4:30ರವರೆಗೆ ಮೆಸ್ಕಾಂನ ಫೋನ್-ಇನ್ ಕಾರ್ಯಕ್ರಮವನ್ನು ಕಾರ್ಕಳ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಗ್ರಾಹಕರು ದೂರವಾಣಿ ಸಂಖ್ಯೆ: 8277882642, 8277882896, 8277882644, 9480833011, 08258-200488ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Next Story





