ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ: ಸ್ವಾಗತ
ಉಡುಪಿ, ಅ.11: ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ. ಭತ್ಯೆ ಹೆಚ್ಚಿಸುವಂತೆ ನೌಕರರ ಸಂಘದಿಂದ ಮನವಿ ಸಲ್ಲಿಸಲಾಗಿತ್ತು ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆಯನ್ನು ಬಿಡುಗಡೆ ಮಾಡಿ ಮೂಲ ವೇತನದ ಶೇ.27.25ರಿಂದ ಶೇ.31ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದ 5.20 ಲಕ್ಷ ಸರಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ನೌಕರರು ಹಾಗೂ 4.50 ನಿವೃತ್ತ ನೌಕರರಿಗೆ ಅನುಕೂಲವಾಗಿದೆ. ಮನವಿಗೆ ಸ್ಪದಿಸಿದ ಮುಖ್ಯಮಂತ್ರಿ ಹಾಗೂ ಸರಕಾರದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





