ಉಡುಪಿ: ಅ.15ರಂದು ನೇರ ಸಂದರ್ಶನ

ಉಡುಪಿ, ಅ.11: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿ ಕೊಳ್ಳುವ ಸಲುವಾಗಿ ಅ.15ರಂದು ಅಪರಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





