ಬೆಳ್ತಂಗಡಿ: ಹಿಟ್ ಆ್ಯಂಡ್ ರನ್ ಪ್ರಕರಣ; ಗಾಯಾಳು ಮೃತ್ಯು

ಬೆಳ್ತಂಗಡಿ; ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು ಗಾಯಾಳು ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ನಡೆದಿದೆ.
ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ 50ರಿಂದ 60ವರ್ಷ ಪ್ರಾಯದ ವ್ಯಕ್ತಿಯಾಗಿದ್ದು ಅವರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಢಿಕ್ಕಿ ಹೊಡೆದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





