ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕಾರ್ಕಳ, ಅ.12: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಅ.11ರಂದು ಸಂಜೆ ವೇಳೆ ಮುಡ್ರಾಲ್ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಕೆರ್ವಾಶೆ ನಿವಾಸಿ ಸುರೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಾಳ ಕಡೆಯಿಂದ ಬಜಗೊಳಿ ಕಡೆಗೆ ಹೋಗುತ್ತಿದ್ದ ಕಾರು, ಬಜಗೊಳಿ ಕಡೆಯಿಂದ ಮಾಳ ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುರೇಶ್ ಶೆಟ್ಟಿ, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





