Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುರತ್ಕಲ್ ಟೋಲ್‌ಗೇಟ್ ತೆರವಿಗೆ ನೇರ...

ಸುರತ್ಕಲ್ ಟೋಲ್‌ಗೇಟ್ ತೆರವಿಗೆ ನೇರ ಕಾರ್ಯಾಚರಣೆ: ಉಡುಪಿಯ ವಿವಿಧ ಸಂಘಟನೆಗಳಿಂದ ಸಂಪೂರ್ಣ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ12 Oct 2022 10:06 PM IST
share
ಸುರತ್ಕಲ್ ಟೋಲ್‌ಗೇಟ್ ತೆರವಿಗೆ ನೇರ ಕಾರ್ಯಾಚರಣೆ: ಉಡುಪಿಯ ವಿವಿಧ ಸಂಘಟನೆಗಳಿಂದ ಸಂಪೂರ್ಣ ಬೆಂಬಲ

ಉಡುಪಿ, ಅ.12: ಕೇವಲ ಆರು ತಿಂಗಳ ಅವಧಿಗೆಂದು ತಾತ್ಕಾಲಿಕವಾಗಿ ಪ್ರಾರಂಭಗೊಂಡ ಸುರತ್ಕಲ್ ಟೋಲ್‌ಗೇಟ್, ಜನರ ಪ್ರಬಲ ವಿರೋಧದ ಹೊರತಾಗಿಯೂ ಕಳೆದ ಏಳು ವರ್ಷಗಳಿಂದ ಅಕ್ರಮವಾಗಿ ಕಾರ್ಯಾಚರಿಸುತಿದ್ದು, ಇದರ ತೆರವಿಗೆ ಅ.೧೮ರಂದು ನಡೆಯಲಿರುವ ನೇರ ಕಾರ್ಯಾಚರಣೆ ಹಾಗೂ ಟೋಲ್‌ಗೇಟ್ ಮುತ್ತಿಗೆಗೆ ಉಡುಪಿಯ ವಿವಿಧ ಸಂಘಟನೆಗಳೂ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಉಡುಪಿ ಸಿಪಿಐ (ಎಂ)ನ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಹೋರಾಟಕ್ಕೆ ಬೆಂಬಲ ಘೋಷಿಸಿರುವ ವಿವಿಧ ಸಂಘಟನೆಗಳ ಪದಾಧಿಕಾರಿ ಗಳೊಂದಿಗೆ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಹೋರಾಟದ ಅಂತಿಮ ಘಟ್ಟ ಇದಾಗಿದ್ದು, ಇದರಲ್ಲಿ ಉಡುಪಿಯ ಸಮಾನಮನಸ್ಕ ಸಂಘಟನೆಗಳು, ಸಂಘಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದು ಘೋಷಿಸಿದರು.

ಸಿಐಟಿಯು, ಕಮ್ಯುನಿಸ್ಟ್ ಪಕ್ಷಗಳಲ್ಲದೇ, ವಿವಿಧ ದಲಿತ ಸಂಘಟನೆಗಳು, ಜಿಲ್ಲಾ ಕಾಂಗ್ರೆಸ್, ಕರಾವಳಿಯ ಸಾರಿಗೆ ಯೂನಿಯನ್‌ಗಳು, ಬಸ್ಸು, ಟ್ಯಾಕ್ಸಿ, ಕ್ಯಾಬ್, ಗೂಡ್ಸ್ ಲಾರಿ, ಟ್ರಕ್ ಮಾಲಕರ ಸಂಘಗಳು, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳ ಸಹ ಅ.18ರ ಹೋರಾಟಕ್ಕೆ ಬೆಂಬಲ ಸೂಚಿಸಿವೆ ಎಂದವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿಯ ಹತ್ತು ಕಿ.ಮೀ. ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರ ಎಂದು ಸಂಸತ್‌ನಲ್ಲಿ ಘೋಷಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮೂರು ತಿಂಗಳೊಳಗೆ ಸುರತ್ಕಲ್ ಟೋಲ್‌ಗೇಟ್‌ನ್ನು ಮುಚ್ಚಿಸುವುದಾಗಿ ಆಶ್ವಾಸನೆ ನೀಡಿದ್ದರೂ, ಅದರ ನಂತರ ಮೂರು ತಿಂಗಳು ಕಳೆದರೂ ಟೋಲ್‌ಗೇಟ್ ನಿರಂತರವಾಗಿ ಕಾರ್ಯಾಚರಿಸುತ್ತಿದೆ. ರಾಜ್ಯದಲ್ಲಿ 18 ಇಂಥ ಅಕ್ರಮ ಟೋಲ್‌ಗೇಟ್‌ಗಳಿದ್ದು, ಕರಾವಳಿಯಲ್ಲಿ ಸುರತ್ಕಲ್ ಹಾಗೂ ಬ್ರಹ್ಮರಕೊಟ್ಲುವಿನ ಟೋಲ್‌ಗೇಟ್ ಇದರಲ್ಲಿ ಸೇರಿವೆ ಎಂದು ದಸಂಸ ಅಂಬೇಡ್ಕರ್ ಬಣದ ಜಿಲ್ಲಾ ಸಂಚಾಲಕ ಸುಂದರ ಮಾಸ್ತರ್ ತಿಳಿಸಿದರು.

ಅ.18ರಂದು ನೇರ ಕಾರ್ಯಾಚರಣೆಯ ಮೂಲಕ ಟೋಲ್‌ಗೇಟ್‌ನ್ನು ಮುಚ್ಚಿಸಲಾಗುವುದು. ಅದನ್ನು ಸಂಪೂರ್ಣ ವಾಗಿ ಮುಚ್ಚುವವರೆಗೂ ಹೋರಾಟ ಮುಂದುವರಿಯಲಿದೆ. ಪೊಲೀಸರು ಬಂಧಿಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಟೋಲ್ ಸಂಗ್ರಹದ ಹೆಸರಿನಲ್ಲಿ ರಾಜಕೀಯ ಪಕ್ಷವೊಂದು ಕೋಟ್ಯಾಂತರ ರೂ.ಗಳ ದರೋಡೆ ನಡೆಸುತ್ತಿದ್ದು, ರಾಜ್ಯಸರಕಾರ ಕಣ್ಣುಮುಚ್ಚಿ ಕುಳಿತಿದೆ ಎಂದವರು ಆರೋಪಿಸಿದರು.

ಸುರತ್ಕಲ್ ಟೋಲ್‌ಗೇಟ್ ಮುಚ್ಚುಗಡೆಯಾದರೆ, ಹೆಜಮಾಡಿಯ ಟೋಲ್‌ಗೇಟ್‌ನಲ್ಲಿ ಶುಲ್ಕ ಹೆಚ್ಚಿಸುವ ಬಗ್ಗೆ ಸುದ್ದಿ ಕೇಳಿಬರುತಿದ್ದು, ಇದಕ್ಕೆ ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಅ.18ರಂದು ಬೆಳಗ್ಗೆ 9.30ಕ್ಕೆ ಸುರತ್ಕಲ್ ಟೋಲ್‌ಗೇಟ್ ಮುಂಭಾಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಾವಿರಾರು ಮಂದಿ ಸೇರಿ ಮುತ್ತಿಗೆ ಹಾಕುವ ಕಾರ್ಯಕ್ರಮವಿದೆ. ಒಟ್ಟಾರೆಯಾಗಿ ಅಲ್ಲಿ ಟೋಲ್ ಸಂಗ್ರಹ ಪ್ರಕ್ರಿಯೆಗೆ ಖಾಯಂ ಅಂತ್ಯ ಹಾಡುವ ನಿರ್ಧಾರ ಮಾಡಲಾಗಿದೆ ಎಂದು ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಇದಕ್ಕೆ ಪೂರ್ವಭಾವಿಯಾಗಿ ಅ.೧೪ರಂದು ಸಂಜೆ ಉಡುಪಿಯಲ್ಲಿ ವಿವಿಧ ಸಂಘಟನೆಗಳ ಉಪಸ್ಥಿತಿಯಲ್ಲಿ ಹೋರಾಟದ ಬಗ್ಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದೂ ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಕೀರ್ತಿ ಶೆಟ್ಟಿ, ಉಡುಪಿ ಜಿಲ್ಲಾ ಟ್ಯಾಕ್ಸಿ ಮಾಲಕರ ಸಂಘದ ಪ್ರಕಾಶ್ ಅಡಿಗ, ಜಿಲ್ಲಾ ಪಿಂಚಣಿದಾರರ ಸಂಘದ ಸಂಜೀವ ಬಳ್ಕೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X