ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ (File Photo)
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ
— Siddaramaiah (@siddaramaiah) October 13, 2022
ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. 2/2
Next Story