ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಆಲಿಯಾ ಅಸಾದಿ ಟ್ವೀಟ್
ಹಿಜಾಬ್ ವಿವಾದ

ಉಡುಪಿ, ಅ. 13: ಹಿಜಾಬ್ ಸಂಬಂಧಿಸಿದ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಉಡುಪಿಯ ಆಲಿಯಾ ಅಸಾದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
'ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತ ತೀರ್ಪಿನಲ್ಲಿನ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷದಲ್ಲಿ ಸಾಂವಿ ಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ' ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
.jpeg)
Next Story





