ಉಚ್ಚಿಲದಲ್ಲಿ ಸ್ಕಾರ್ಪಿಯೊ ಚಾಲಕನ ಅವಾಂತರ; 4 ವಾಹನಗಳಿಗೆ ಢಿಕ್ಕಿ

ಪಡುಬಿದ್ರೆ: ಉಚ್ಚಿಲ ರಾ. ಹೆದ್ದಾರಿ 66ರ ಮಸೀದಿ ಎದುರು ಸ್ಕಾರ್ಪಿಯೊ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೊ ಕಾರು ಚಾಲಕ ಎರ್ಮಾಳು ರಾ. ಹೆದ್ದಾರಿ 66ರಲ್ಲಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದ್ದು, ಅಲ್ಲಿ ನಿಲ್ಲಿಸದೆ ಅತಿವೇಗದಿಂದ ಬಂದು ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಮಸೀದಿಯ ಎದುರು ಕಾರು, ಬೈಕು ಹಾಗೂ ಮೀನಿನ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಕಾರ್ಪಿಯೊ ಢಿಕ್ಕಿ ಹೊಡೆದ ಪರಿಣಾಮ ಕಾರು ವಿಭಾಜಕ ಏರಿ ಇನ್ನೊಂದು ಪಥದತ್ತ ತಿರುಗಿ ನಿಂತಿದೆ. ಸ್ಕೂಟಿ ಸವಾರ ಹಾಗೂ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story







