Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್:...

ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್: ಟೆಂಡರ್ ಪ್ರಕ್ರಿಯೆ ಇಲ್ಲ

ಜಿ.ಮಹಾಂತೇಶ್ಜಿ.ಮಹಾಂತೇಶ್14 Oct 2022 8:53 AM IST
share
ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್: ಟೆಂಡರ್ ಪ್ರಕ್ರಿಯೆ ಇಲ್ಲ

5 ವರ್ಷಗಳಲ್ಲಿ ಕಲಬುರಗಿ ವಿಭಾಗದ ಯಾದಗಿರಿಯಲ್ಲಿ 69, 572, ಕಲಬುರಗಿಯಲ್ಲಿ 1,31,759, ಬೆಳಗಾವಿ ವಿಭಾಗದ ಉತ್ತರ ಕನ್ನಡದಲ್ಲಿ 36,344, ಬೆಳಗಾವಿಯಲ್ಲಿ 1,71, 128, ಮೈಸೂರು ವಿಭಾಗದ ಕೊಡಗಿನಲ್ಲಿ 23,328, ಮೈಸೂರಿನಲ್ಲಿ 1,03,548, ಬೆಂಗಳೂರು ವಿಭಾಗದ ಬೆಂಗಳೂರಿನಲ್ಲಿ 32,655, ಚಿತ್ರದುರ್ಗ ಜಿಲ್ಲೆಯಲ್ಲಿ 92,466 ಬೈಸಿಕಲ್‌ಗಳನ್ನು ವಿತರಿಸಲಾಗಿದೆ.

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಯೋಜನೆಯನ್ನು ಇದೇ ವರ್ಷದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿ ಹಲವು ತಿಂಗಳುಗಳು ಕಳೆದಿದ್ದರೂ ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ಗಳು ಸಿಗುವ ಲಕ್ಷಣಗಳಿಲ್ಲ.

2023-24ನೇ ಸಾಲಿನಿಂದ ಸರಕಾರಿ ಮತ್ತು ಅನುದಾನಿತ ಶಾಲೆಗಳ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೈಸಿಕಲ್‌ಗಳನ್ನು ವಿತರಿಸಲು ಉದ್ದೇಶಿಸಿರುವ ಸರಕಾರವು ಈ ಸಂಬಂಧ ಟೆಂಡರ್ ಪ್ರಕ್ರಿಯೆಗಳನ್ನು ನಡೆಸದಿರಲು ನಿರ್ಧಾರ ಮಾಡಿದೆ. ಈ ಯೋಜನೆಯನ್ನು ಟೆಂಡರ್ ಮೂಲಕ ಅನುಷ್ಠಾನಗೊಳಿಸದೇ ನೇರವಾಗಿ ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆ (ಡಿಬಿಟಿ) ಮೂಲಕ ಅನುಷ್ಠಾನಗೊಳಿಸುವ ಬಗ್ಗೆ ಚಿಂತಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ 2022ರ ಅಕ್ಟೋಬರ್ 10ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು '' the-file.in''ಗೆ ಲಭ್ಯವಾಗಿದೆ.

ಉಚಿತ ಬೈಸಿಕಲ್ ವಿತರಿಸುವ ಸಂಬಂಧ ಅನುಮತಿ ಕೋರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು 2022ರ ಸೆಪ್ಟಂಬರ್ 7ರಂದು ಸರಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿರುವ ಸರಕಾರವು ‘ಸರಕಾರವು ಪ್ರಾಯೋಜಿಸುವ ಎಲ್ಲ ಯೋಜನೆಗಳಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲದೇ ಫಲಾನುಭವಿಗಳಿಗೆ ನೇರವಾಗಿ ತಲುಪಿಸಲು ಉದ್ದೇಶಿಸಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಡಿಬಿಟಿ ಮೂಲಕ ಅನುಷ್ಠಾನಗೊಳಿಸಬೇಕಿದೆ. ಈ ನಿಟ್ಟಿನಲ್ಲಿ 2023-24ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಯೋಜನೆಯನ್ನು ಟೆಂಡರ್ ಮೂಲಕ ಅನುಷ್ಠಾನಗೊಳಿಸದೇ ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ (ಡಿಬಿಟಿ) ಅನುಷ್ಠಾನಗೊಳಿಸಲು ಉಂಟಾಗುವ ಸಾಧಕಬಾಧಕಗಳ ಕುರಿತು ಪರಿಶೀಲಿಸಿ ನಿರ್ದಿಷ್ಟ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಬೇಕು,’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಶಾಲಾ ವಿದ್ಯಾರ್ಥಿಗಳ ಕಲಿಕೆ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಬೈಸಿಕಲ್ ನೀಡುವ ಯೋಜನೆ ಪ್ರಸ್ತಾವವನ್ನೇ ಆರ್ಥಿಕ ಇಲಾಖೆಯು ಈಗಾಗಲೇ ತಿರಸ್ಕರಿಸಿದೆ. ವಿಶೇಷವೆಂದರೆ ಶಿಕ್ಷಣ ಇಲಾಖೆಯ ಪ್ರಸ್ತಾವ ತಿರಸ್ಕರಿಸಿರುವ ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲ ತಿಂಗಳ ಹಿಂದೆಯೇ ಅನುಮೋದಿಸಿದ್ದಾರೆ.

‘ಬೈಸಿಕಲ್‌ಗಳನ್ನು ನೀಡುವುದರಿಂದ ಕಲಿಕೆಯ ಫಲಿತಾಂಶಗಳ ಮೇಲೆ ಪ್ರಭಾವ ಬೀರಿದೆಯೇ ಎಂಬ ಬಗ್ಗೆ ಸ್ಪಷ್ಟ ಪುರಾವೆಗಳಿಲ್ಲ. ರಾಜ್ಯಮಟ್ಟದಲ್ಲಿ 8ನೇ ತರಗತಿಯ (ಶೇ.25) ದಾಖಲಾತಿಯಲ್ಲಿ ಲಿಂಗ ಅಂತರವು ಉಳಿದಿರುವುದು ಕಂಡುಬಂದಿದೆ. ಸೈಕಲ್ ವಿತರಣೆ ಮಾಡಿದರೂ ಹುಡುಗ ಮತ್ತು ಹುಡುಗಿಯರ ಮಾಧ್ಯಮಿಕ ಶಾಲೆ ದಾಖಲಾತಿಯನ್ನು ಸಮನಾಗಿ ತರಲು ಸಾಧ್ಯವಾಗಲಿಲ್ಲ ಎಂದು ಸೂಚಿಸುತ್ತದೆ. ಪರೀಕ್ಷೆಯ ಫಲಿತಾಂಶಗಳಲ್ಲಿ ಕೇವಲ ಶೇ.3ರಷ್ಟು ಏರಿಕೆಯಾಗಿರುವುದರಿಂದ ಕಲಿಕೆಯ ಫಲಿತಾಂಶಗಳ ಮೇಲೆ ಯಾವುದೇ ಪರಿಣಾಮ ಬೀರಿರುವುದಿಲ್ಲ ಎಂದು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು 2021ರ ನವೆಂಬರ್‌ನಲ್ಲಿ ವರದಿ ನೀಡಿತ್ತು. ಮೌಲ್ಯಮಾಪನ ವರದಿ ಆಧರಿಸಿ ಆರ್ಥಿಕ ಇಲಾಖೆಯು ಈ ಅಭಿಪ್ರಾಯವನ್ನು ನೀಡಿತ್ತು.

2022-23ನೇ ಸಾಲಿನಿಂದ ಮುಂದಿನ ಮೂರು ವರ್ಷಕ್ಕೆ ಬೈಸಿಕಲ್ ವಿತರಣೆ ಮಾಡುವ ಸಂಬಂಧ ತಲಾ ವರ್ಷದಲ್ಲಿ 6 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ಕೋಟಿ ರೂ.ಯಂತೆ 750 ಕೋಟಿ ರೂ. ವೆಚ್ಚವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಅಂದಾಜಿಸಿತ್ತು. ಇದೇ ಪ್ರಸ್ತಾವವನ್ನು ಬಜೆಟ್‌ನಲ್ಲಿ ಘೋಷಿಸಲು ಸಲ್ಲಿಸಿತ್ತು. ಆದರೆ ಬಜೆಟ್‌ನಲ್ಲಿ ಈ ಯೋಜನೆ ಘೋಷಣೆಯಾಗಿರಲಿಲ್ಲ.

2006-07ರ ಆರಂಭದಿಂದ 2017-18ರವರೆಗೆ ಈ ಯೋಜನೆಯು ಸುಮಾರು 1,800 ಕೋಟಿ ರೂ. ವೆಚ್ಚದಲ್ಲಿ 62 ಲಕ್ಷ ಸೈಕಲ್‌ಗಳನ್ನು ವಿತರಿಸಿದೆ. ಈ ಯೋಜನೆಯು 2006-07ರಲ್ಲಿ 4.2 ಲಕ್ಷ ಬೈಸಿಕಲ್‌ಗಳಿಗೆ 85 ಕೋಟಿ ರೂ., 2014-15ರಲ್ಲಿ ಸುಮಾರು 5.5 ಲಕ್ಷ ಬೈಸಿಕಲ್‌ಗಳಿಗೆ 180 ಕೋಟಿ ರೂ. ವ್ಯಯಿಸಿದೆ. 2017-18ರಲ್ಲಿ 172 ಕೋಟಿ ರೂ. ವೆಚ್ಚದಲ್ಲಿ 5.5 ಲಕ್ಷ ಬೈಸಿಕಲ್ ತಲುಪಿಸಿದೆ ಎಂಬುದು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ವರದಿಯಿಂದ ತಿಳಿದು ಬಂದಿದೆ.

ಪ್ರೌಢಶಾಲಾ ಮಟ್ಟದಲ್ಲಿ ಶಾಲಾ ಹಾಜರಾತಿಯನ್ನು ಸುಧಾರಿಸುವ ಉದ್ದೇಶದಿಂದ ಹಾಗೂ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಉಚಿತವಾಗಿ ಬೈಸಿಕಲ್ ಒದಗಿಸುವ ಯೋಜನೆಯನ್ನು 2006-07ರಿಂದ ಪರಿಚಯಿಸಲಾಗಿದೆ. ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ ಮಾಧ್ಯಮಿಕ ಶಾಲೆಯ ದಾಖಲಾತಿಯನ್ನು ಸುಧಾರಿಸುವುದು ಯೋಜನೆಯ ಮುಖ್ಯ ಉದ್ಧೇಶವಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X