ಮಾಸ್ಕೋದಿಂದ ದಿಲ್ಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರಿಕೆ

Photo:PTI
ಹೊಸದಿಲ್ಲಿ: ಮಾಸ್ಕೋದಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಎಚ್ಚರಿಕೆಯ ಇಮೇಲ್ ಗುರುವಾರ ರಾತ್ರಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಐಜಿಐ) ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಮೇಲ್ ಬಂದ ನಂತರ, ಭದ್ರತಾ ಏಜೆನ್ಸಿಗಳನ್ನು ಅಲರ್ಟ್ ಗೊಳಿಸಲಾಗಿದೆ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಪರಿಶೀಲಿಸಲಾಗುತ್ತಿದೆ.
ಪೊಲೀಸರ ಪ್ರಕಾರ, ವಿಮಾನವು ಮಾಸ್ಕೋದಿಂದ ರಾತ್ರಿ 3:20 ಕ್ಕೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿತು.
"ಇಂದು ರಾತ್ರಿ 3:20 ಕ್ಕೆ ಮಾಸ್ಕೋದಿಂದ ಟರ್ಮಿನಲ್ 3 (T3) ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ರಾತ್ರಿ 11:15 ಕ್ಕೆ ಕರೆ ಬಂದಿತು. ವಿಮಾನ ಸಂಖ್ಯೆ SU232 ರನ್ ವೇ 29 ರಲ್ಲಿ ಇಳಿಯಿತು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಟ್ಟು 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿಯನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ.
ಸೆಪ್ಟೆಂಬರ್ 10 ರಂದು ಲಂಡನ್ಗೆ ಹೋಗುವ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ನಂತರ ಭದ್ರತಾ ಏಜೆನ್ಸಿಗಳು ಕಟ್ಟೆಚ್ಚರ ವಹಿಸಿದ್ದವು.







