Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೀಘ್ರವೇ ಸುರತ್ಕಲ್ ಟೋಲ್ ಗೇಟ್ ತೆರವು;...

ಶೀಘ್ರವೇ ಸುರತ್ಕಲ್ ಟೋಲ್ ಗೇಟ್ ತೆರವು; ಹೋರಾಟ ಕೈಬಿಡಿ: ಮಂಗಳೂರು ಎಸಿ ಮದನ್ ಮೋಹನ್ ಮನವಿ

ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ಹಿಂಪಡೆಯುವುದಿಲ್ಲ: ಹೋರಾಟ ಸಮಿತಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ14 Oct 2022 4:29 PM IST
share
ಶೀಘ್ರವೇ ಸುರತ್ಕಲ್ ಟೋಲ್ ಗೇಟ್ ತೆರವು; ಹೋರಾಟ ಕೈಬಿಡಿ: ಮಂಗಳೂರು ಎಸಿ ಮದನ್ ಮೋಹನ್ ಮನವಿ

ಪಣಂಬೂರು, ಅ.14: ಅಕ್ಟೋಬರ್ 18ರ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಪರವಾಗಿ ಇಂದು ಪಣಂಬೂರು ಪೊಲೀಸ್ ಉಪ ಆಯುಕ್ತರ  ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಮದನ್ ಮೋಹನ್, ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸಗಳು ನಡೆಯುತ್ತಿವೆ. ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಇನ್ನು ಕೆಲವು ದಿನಗಳಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆದ್ದರಿಂದ ಹೋರಾಟ ಕೈ ಬಿಡಬೇಕೆಂದು ಹೋರಾಟ ಸಮಿತಿಯನ್ನು ವಿನಂತಿಸಿದರು.

ಈ‌ ವೇಳೆ ಸಭೆಯಲ್ಲಿದ್ದ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಕಳೆದ ಆರು ವರ್ಷಗಳಲ್ಲಿ ಈ ರೀತಿಯ ಟೋಲ್ ಗೇಟ್ ತೆರವಿನ ಹಲವು ಭರವಸೆಗಳನ್ನು ನೀಡಲಾಗಿದೆ. ಕಳೆದ ಆರು ತಿಂಗಳಿನಲ್ಲಿ ಸರಕಾರದ ಹಲವು ವೇದಿಕೆ, ವಿಧಾನ ಸಭೆಯಲ್ಲೂ ತಿಂಗಳೊಳಗೆ ಟೋಲ್ ಗೇಟ್ ತೆರವು ಎಂಬ ಹೇಳಿಕೆಗಳು ಹೊರಬಿದ್ದಿವೆ. ಆದರೆ ಅವು ಯಾವುದೂ ಜಾರಿಗೆ ಬಂದಿಲ್ಲ. ಈಗಿನ ಭರವಸೆಯೂ ಜಾರಿಗೆ ಬರುತ್ತದೆ ಎಂಬ ವಿಶ್ವಾಸ ಜನತೆಗಿಲ್ಲ ಎಂದರು.

ದ.ಕ., ಉಡುಪಿ ಎರಡೂ ಜಿಲ್ಲೆಗಳ ನೂರಾರು ಸಂಘಟನೆಗಳು ಅ.18ರ ಮುತ್ತಿಗೆ ತೀರ್ಮಾನವನ್ನು ಬೆಂಬಲಿಸಿ ಭಾಗವಹಿಸಲಿವೆ. ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ, ಭರವಸೆಯ ಆಧಾರದಲ್ಲಿ‌ ಹೋರಾಟ ಮುಂದೂಡಲು ಅವರು ಸಮ್ಮತಿಸಲಾರರು. ಹೋರಾಟವನ್ನು ಒಕ್ಕೊರಲಿನಿಂದ ಬೆಂಬಲಿಸುತ್ತಿರುವ ಜನತೆ ಇದನ್ನು ಒಪ್ಪವುದಿಲ್ಲ ಎಂದು ಸಭೆಯಲ್ಲಿ ಸ್ಪಷ್ಟಪಡಿಸಿದರು.

ಸರಕಾರದ ಹೇಳಿಕೆಯ ಪ್ರಕಾರ ಇನ್ನು ಕೆಲವೇ ದಿನದಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಬೇಕಾದ ಪ್ರಕ್ರಿಯೆ ಪೂರ್ಣಗೊಳ್ಳುವುದಾದರೆ, ತೀರ್ಮಾನ ಜಾರಿಯಾಗುವುದಾದರೆ ಅಲ್ಲಿಯವರಗಿನ ಒಂದಿಷ್ಟು ದಿನಗಳ ಟೋಲ್ ಸಂಗ್ರಹ ಬಿಟ್ಟುಕೊಟ್ಟರೆ ದೊಡ್ಡ ನಷ್ಟವೇ‌ನೂ ಆಗುವುದಿಲ್ಲ. ಏಳು ವರ್ಷಗಳ ಕಾಲ ಸತತವಾಗಿ ನೂರಾರು ಕೋಟಿ ರೂಪಾಯಿ ಸುರತ್ಕಲ್  ಟೋಲ್ ಗೇಟ್ ನಲ್ಲಿ ಈಗಾಗಲೆ ಸಂಗ್ರಹಿಸಲಾಗಿದೆ. ಆದುದರಿಂದ ಜನರ ಆಕ್ರೋಶ, ಆಗ್ರಹವನ್ನು ಪುರಸ್ಕರಿಸಿ ಟೋಲ್ ಸಂಗ್ರಹವ‌ನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು. ಅ.18ರ ಟೋಲ್ ಗೇಟ್ ಮುತ್ತಿಗೆ ಧರಣಿಯನ್ನು ಶಾಂತಿಯುತವಾಗಿ ನಡೆಸಲಿದ್ದೇವೆ. ಟೋಲ್ ಸಂಗ್ರಹ ಸ್ಥಗಿತಗೊಂಡಿರುವುದು ಖಾತರಿಗೊಳ್ಳುವವರಗೆ ಮುತ್ತಿಗೆ ಮುಂದುವರಿಯಲಿದೆ ಎಂದು ಮುನೀರ್ ಕಾಟಿಪಳ್ಳ ಸಭೆಯಲ್ಲಿ ನುಡಿದರು.
ಇಂದಿನ ಸಭೆಯಲ್ಲಿ ಹೋರಾಟ ಸಮಿತಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಜಿಲ್ಲಾಧಿಕಾರಿಗೆ ತಲುಪಿಸಲಾಗುವುದು ಎಂದು ಎ.ಸಿ. ಭರವಸೆ ನೀಡಿದರು.
ಸಭೆಯಲ್ಲಿ ಎಸಿಪಿ ಮಹೇಶ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಲಭ್ಯ ಸುಮಾರು 30 ಪದಾಧಿಕಾರಿಗಳು ಉಪಸ್ಥಿತರಿದ್ದರು.
 



ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ನಿಲ್ಲುವುದಿಲ್ಲ:
ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆ ತೀರ್ಮಾನದಂತೆ ಶಾಂತಿಯುತವಾಗಿ ನಡೆಯಲಿದೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ಬೆಳಗ್ಗೆ 9:30ಕ್ಕೆ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಸೇರಬೇಕು. ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗದೆ  ಟೋಲ್ ತೆರವು ಹೋರಾಟದ ಯಶಸ್ಸಿಗೆ ಕೈ ಜೋಡಿಸಬೇಕು. ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಈ ಬಾರಿಯ ಹೋರಾಟ ಮುಗಿಯುವುದಿಲ್ಲ ಎಂದು ಸುರತ್ಕಲ್ ಟೋಲ್ ಗೇಟ್ ಹೊರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X