Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮೋದಿಯನ್ನು ಟೀಕಿಸುವವರ ವಿರುದ್ಧ...

'ಮೋದಿಯನ್ನು ಟೀಕಿಸುವವರ ವಿರುದ್ಧ ಪ್ರತಿಭಟಿಸಿ' ಎಂದಿದ್ದ ಬಿಎಸ್‌ವೈಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ14 Oct 2022 7:55 PM IST
share
ಮೋದಿಯನ್ನು ಟೀಕಿಸುವವರ ವಿರುದ್ಧ ಪ್ರತಿಭಟಿಸಿ ಎಂದಿದ್ದ ಬಿಎಸ್‌ವೈಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ

ಬೆಂಗಳೂರು, ಅ.14: ಪ್ರಧಾನಿ ಮೋದಿಯನ್ನು ಟೀಕಿಸುವವರ ವಿರುದ್ಧ ಪ್ರತಿಭಟಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಗಳನ್ನು ಹಾಕಿದ್ದಾರೆ.

ಅಲ್ಲದೆ, ತನ್ನ ಪ್ರಶ್ನೆಗಳಿಗೆ  ಯಡಿಯೂರಪ್ಪ ಉತ್ತರವನ್ನು ಲಿಖಿತ ಮೂಲಕವಾಗಿಯಾಗಲಿ ಅಥವಾ ಬಹಿರಂಗ ಚರ್ಚೆಗೆ ಬರುವುದರ ಮೂಲಕವಾದರೂ ನೀಡಿದರೆ, ಆ ಉತ್ತರಗಳು ರಾಜ್ಯದ ಜನರಿಗಿರಲಿ, ಬಿಜೆಪಿ ಕಾರ್ಯಕರ್ತರಿಗಾದರೂ ಸಮಾಧಾನ ತಂದರೆ, ಅದರ ನಂತರ ಮೋದಿ ಟೀಕೆ-ವಿಮರ್ಶೆಗೆ ಅರ್ಹರೊ ಅಥವಾ ವಿಮರ್ಶಾತೀತರೊ ಎಂಬುದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

1. 2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾರ ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ ಹೇಳಿ?

2. ಮೋದಿ ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ, ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

3. 2014ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿ ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?

4. ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು?  2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

5. 2014ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ

6. 2014ಕ್ಕೆ ಮೊದಲು ರೈತರು, ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ?

7. ರೈತರ  ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

8. 2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21ಕ್ಕೆ ಇಳಿಯಲು ಮೋದಿ ಸರಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

9. 2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಸಾಲ ಇದ್ದದ್ದು ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

10. 2018ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು? 

11. 2014ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ  ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 60 ಸಾವಿರ ಕೋಟಿಗಳನ್ನು ಕಳೆದುಕೊಳ್ಳುತ್ತಿದೆ.

12. 2014ಕ್ಕಿಂತ ಮೊದಲು ಕೇಂದ್ರ ಸರಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು?  ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ? 

13. 1947 ರಿಂದ 2014 ರವರೆಗೆ ಕೇಂದ್ರ ಸರಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು?  ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?  

14. 2014ರ ನಂತರ ಮೋದಿ ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

15. ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ  ಬೇರೆ ದಾರಿ ಇದೆಯೆ

16. 2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕøತ ಯೋಜನೆಗಳಿಗೆ ಕೇಂದ್ರ ಸರಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?

17. 2014 ಕ್ಕೆ ಮೊದಲು ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

18. 2004-05 ರಿಂದ 2013-14 ರವರೆಗೆ ಕೇಂದ್ರ ಸರಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

19. 2014ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

20. 2014ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ. ಇದ್ದದ್ದು. ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

21. 2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

22. 2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75ನೇ ಸ್ಥಾನದಲ್ಲಿದ್ದದ್ದು  2020ರ ವೇಳೆಗೆ 111ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

23. 2013-2019 ರವರೆಗೆ ಮೋದಿ ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

24. ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40  ರ್ಯಾಂಕ್ ಇದ್ದದ್ದು 2021ರ ಹೊತ್ತಿಗೆ 43ನೆ  ಸ್ಥಾನಕ್ಕೆ ಕುಸಿಯಲು ಕಾರಣವೇನು?

25. ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117ನೇ ಸ್ಥಾನದಲ್ಲಿದ್ದದ್ದು 2021ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

26. ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

27. ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‍ನಲ್ಲಿ 2014 ರಲ್ಲಿ 85ನೆ ಸ್ಥಾನದಲ್ಲಿದ್ದ ಭಾರತದ ಸ್ಥಾನ 2020ರ ವೇಳೆಗೆ 86ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿ ಹೊರಬೇಕಲ್ಲವೆ?

28. ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ರಲ್ಲಿ ತೀವ್ರ ಕುಸಿತ ಕಾಣಲು ಕಾರಣ ಯಾರು?

29. ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017ರಲ್ಲಿ ಭಾರತವು 40ನೇ ರ್ಯಾಂಕ್ ನಲ್ಲಿದ್ದದ್ದು 2020ರ ವೇಳೆಗೆ 68ನೇ ಸ್ಥಾನಕ್ಕೆ ಕುಸಿಯಲು ಮೋದಿ ನೇತೃತ್ವದ ಬಿಜೆಪಿ ಸರಕಾರ ಕಾರಣವಲ್ಲವೆ?

30. ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿ ಆಡಳಿತ ಕಾರಣವಲ್ಲವೆ?

31. ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

32. ಬ್ಲೂಮ್ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

33. ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯಲ್ಲವೆ?

34. ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ ಅನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೆ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

35. 2014ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ?  ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

36. ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ಮೋದಿ ಇಂದಾಗಿಯೆ ದೇಶ ದಾರಿದ್ರ್ಯಕ್ಕೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪ, ಬೊಮ್ಮಾಯಿ ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕೆಂದು ಜನರೆ ತೀರ್ಮಾನ ಮಾಡಬೇಕು? ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬಗ್ಗೆ ಯಾರೇ ಹಗುರವಾಗಿ ಮಾತನಾಡಿದರೆ ತಕ್ಷಣ ಪ್ರತಿಭಟಿಸಿ: ಕಾರ್ಯಕರ್ತರಿಗೆ ಬಿಎಸ್ ವೈ ಕರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X