Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಕ್ತಾ ಕಪೂರ್ ಯುವಪೀಳಿಗೆಯ ಮನಸ್ಸನ್ನು...

ಏಕ್ತಾ ಕಪೂರ್ ಯುವಪೀಳಿಗೆಯ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ: ಸುಪ್ರೀಂ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ14 Oct 2022 9:30 PM IST
share
ಏಕ್ತಾ ಕಪೂರ್ ಯುವಪೀಳಿಗೆಯ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ: ಸುಪ್ರೀಂ ಪ್ರಹಾರ

 ಹೊಸದಿಲ್ಲಿ,ಅ.14: ಟಿವಿ ಮತ್ತು ವೆಬ್ ಸರಣಿಗಳ ನಿರ್ಮಾಪಕಿ ಏಕ್ತಾ ಕಪೂರ್(Ekta Kapoor) ಅವರನ್ನು ಶುಕ್ರವಾರ ತೀವ್ರ ತರಾಟೆಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲ(Supreme Court)ಯವು,ಅವರು ಯುವಪೀಳಿಗೆಯ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ ಎಂದು ಕಿಡಿಕಾರಿತು.

ವೆಬ್ ಸರಣಿ xxx ಕುರಿತು ತನ್ನ ವಿರುದ್ಧದ ಬಂಧನ ವಾರಂಟ್ ಗಳನ್ನು ಪ್ರಶ್ನಿಸಿ ಕಪೂರ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.

ಕಳೆದ ತಿಂಗಳು ಬಿಹಾರದ ನ್ಯಾಯಾಲಯವೊಂದು ಯೋಧರನ್ನು ಅವಮಾನಿಸಿದ್ದ ಮತ್ತು ಅವರ ಕುಟುಂಬಗಳ ಭಾವನೆಗಳಿಗೆ ನೋವನ್ನುಂಟು ಮಾಡಿದ್ದ ಆರೋಪಗಳಲ್ಲಿ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್(Shobha Kapoor) ವಿರುದ್ಧ ಬಂಧನ ವಾರಂಟ್ ಅನ್ನು ಹೊರಡಿಸಿತ್ತು. ವೆಬ್ ಸರಣಿಯನ್ನು ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್(Balaji Telefilms) ಒಡೆತನದ ಎಎಲ್ಟಿ ಬಾಲಾಜಿ ಒಟಿಟಿಯಲ್ಲಿ ಪ್ರಸಾರಿಸಲಾಗಿತ್ತು. ಶೋಭಾ ಕಪೂರ್ ಬಾಲಾಜಿ ಟೆಲಿ ಫಿಲ್ಮ್ಸ್ ನೊಂದಿಗೆ ಗುರುತಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಏನಾದರೂ ಮಾಡಬೇಕಿದೆ ಎಂದು ಶುಕ್ರವಾರ ವಿಚಾರಣೆ ಸಂದರ್ಭ ಹೇಳಿದ ನ್ಯಾಯಮೂರ್ತಿಗಳಾದ ಅಜಯ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ ಅವರ ಪೀಠವು,ಒಟಿಟಿ ಕಂಟೆಂಟ್ ಈಗ ಎಲ್ಲರಿಗೂ ಲಭ್ಯವಿದೆ. ನೀವು ಜನರಿಗೆ ಯಾವ ರೀತಿಯ ಆಯ್ಕೆಯನ್ನು ಒದಗಿಸುತ್ತಿದ್ದೀರಿ ಎಂದು ಪ್ರಶ್ನಿಸಿತು.

ಒಟಿಟಿ ವೇದಿಕೆಗಳಲ್ಲಿಯ ಕಂಟೆಂಟ್ ಚಂದಾದಾರಿಕೆಯ ಆಧಾರದಲ್ಲಿ ಬಳಕೆದಾರರಿಗೆ ಲಭ್ಯವಿದೆ ಮತ್ತು ಈ ದೇಶದಲ್ಲಿ ಆಯ್ಕೆಯ ಸ್ವಾತಂತ್ರವಿದೆ ಎಂದು ಕಪೂರ್ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿ ವಾದಿಸಿದರು.

ಆದಾಗ್ಯೂ ವೀಕ್ಷಕರಿಗೆ ಯಾವ ರೀತಿಯ ಆಯ್ಕೆಯನ್ನು ನೀಡಲಾಗುತ್ತಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ ನ್ಯಾಯಾಧೀಶರು,ಪ್ರತಿ ಸಲವೂ ನೀವು ಈ ನ್ಯಾಯಾಲಯಕ್ಕೆ ಬರುತ್ತೀರಿ,ನಾವು ಇದನ್ನು ಮೆಚ್ಚುವುದಿಲ್ಲ ಎಂದು ಹೇಳಿದರು.

‘ಇಂತಹ ಅರ್ಜಿಯನ್ನು ಸಲ್ಲಿಸಿದ್ದಕ್ಕಾಗಿ ನಾವು ನಿಮಗೆ ದಂಡ ವಿಧಿಸುತ್ತೇವೆ. ರೋಹಟ್ಗಿಯವರೇ,ಇದನ್ನು ನಿಮ್ಮ ಕಕ್ಷಿದಾರರಿಗೆ ತಿಳಿಸಿ’ ಎಂದು ಪೀಠವು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X