ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ: ಡಿ.6ರಂದು ಪರಿಶೀಲನೆಗೆ ಸುಪ್ರೀಂ ನಿರ್ಧಾರ

PHOTO: PTI
ಹೊಸದಿಲ್ಲಿ, ಅ.14: ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ಪಾವತಿಗೆ ಅನುಮತಿ ನೀಡುವುದನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಡಿಸೆಂಬರ್ 6 ರಂದು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು ಇದೊಂದು ಮಹತ್ವದ ವಿಷಯವಾಗಿರುವುದರಿಂದ, ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಅವರ ನೆರವನ್ನು ಕೋರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.
ಚುನಾವಣಾ ಬಾಂಡ್ಗಳ ಮೂಲಕ ಹಣವನ್ನು ಪಡೆಯುವ ವಿಧಾನಶಾಸ್ತ್ರ (ಮೆಥಡಾಲಜಿ)ವು ಅತ್ಯಂತ ಪಾರದರ್ಶಕವಾದುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.ರಾಜಕೀಯ ಪಕ್ಷಗಳಿಗೆ ನಿಧಿ ಪೂರೈಕೆಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನವಾಗಿ ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳಿಗೆ ಪರ್ಯಾಯವಾಗಿ ಚುನಾವಣಾ ಬಾಂಡ್ಗಳನ್ನು ರೂಪಿಸಲಾಗಿದೆ ಎಂದರು.
ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ಪಾವತಿಯನ್ನು ಪ್ರಶ್ನಿಸಿ ಎನ್ಜಿಓ ಸಂಸ್ಥೆಯಾದ ಪ್ರಜಾತಾಂತ್ರಿಕ ಸುಧಾರಣೆಗಳ ಸಂಘ , ಸಿಪಿಎಂ ಹಾಗೂ ಇತರ ದೂರುದಾರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ.







