ಅ.21ರಂದು ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜನಜಾಗೃತಿ ಜಾಥಾ
ಮಂಗಳೂರು, ಅ. 15: ದೇಶಾದ್ಯಂತ ಜನರು ಅನುಭವಿಸುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮೊದಲಾದ ಸಮಸ್ಯೆಗಳಿಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ದೇಶಾದ್ಯಂತ ಅ.15ರಿಂದ 30ರ ವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಸರಫ್ರಾಝ್ ತಿಳಿಸಿದ್ದಾರೆ.
ಶನಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಭಾಗವಾಗಿ ಕಲ್ಯಾಣ ಕರ್ನಾಟಕದ ಕೇಂದ್ರವಾಗಿರುವ ಕಲಬುರ್ಗಿಯಿಂದ ಮಂಗಳೂರಿನವರೆಗೆ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಕಲಬುರ್ಗಿಯಲ್ಲಿ ಚಾಲನೆ ನೀಡಲಾಗಿದೆ. ಅ.21ರಂದು ಮಂಗಳೂರಿಗೆ ತಲುಪಲಿದ್ದು, ಸುರತ್ಕಲ್, ಉರ್ವಸ್ಟೋರ್, ಕಂಕನಾಡಿ, ಜೆಪ್ಪು, ತೊಕ್ಕೊಟ್ಟು, ಉಳ್ಳಾಲದಲ್ಲಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಬೀದಿನಾಟಕ ಮೊದಲಾದವುಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್, ಎಫ್ ಟಿಯು ರಾಜ್ಯ ಉಪಾಧ್ಯಕ್ಷ ದಿವಾಕರ್ ರಾವ್ ಬೋಳೂರು, ದ.ಕ ಜಿಲ್ಲಾ ಸಮಿತಿ ವಕ್ತಾರ ಅರಫಾ ಮಂಚಿ, ಖಜಾಂಚಿ ಎಸ್.ಎಂ.ಮುತ್ತಲಿಬ್ ಉಪಸ್ಥಿತರಿದ್ದರು.





