Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ...

ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2022 3:40 PM IST
share
ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು  ಕಿಡಿಕಾರಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಥಳೀಯ ಭಾಷೆಗಳನ್ನು ಉದ್ಧಾರ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಹಿಂದಿಯನ್ನು ಹೇರಿಕೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ, ನಾವು ಒಪ್ಪುವುದಿಲ್ಲ ಎಂದರು.

ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು, ಗೃಹ ಸಚಿವರಿಗೆ ತಿಳಿವಳಿಕೆ ಮೂಡಿಸಬೇಕು. ಪದೇಪದೆ ಭಾಷೆಗಳ ವಿಷಯವನ್ನೇ ಕೆದಕುತ್ತಾ ಕೂರುವುದು ಸರಿಯಲ್ಲ. ಇದನ್ನೇ ಹೀಗೆಯೇ  ಕೆದಕುತ್ತಾ ಹೋದರೆ ದೇಶದ ಸಮಗ್ರತೆ, ಏಕತೆಗೆ ಧಕ್ಕೆ ಆಗುತ್ತದೆ. ಈ ಬಗ್ಗೆ ಗೃಹ ಸಚಿವರ ನೇತೃತ್ವದ ಸಮಿತಿ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಈಗಾಗಲೇ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಒಂದು ರಾಷ್ಟ್ರ - ಒಂದು ಭಾಷೆ ಎನ್ನುವ ನೀತಿಯನ್ನು ತಂದು ಬಿಜೆಪಿ ನಾಯಕರು ಇತರೆ ಭಾಷೆಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಆದರೆ, ಇತರೆ  ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿಗಳು.

ಕೇಂದ್ರದ ಧೋರಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಹಿಂದಿ ಹೇರಿಕೆ ಮಾಡುವುದಕ್ಕಿಂತ ಬೇರೆ ಸಮಸ್ಯೆಗಳ ಕಡೆ ಕೇಂದ್ರ ಸರಕಾರ ಗಮನ ಹರಿಸುವುದು ಉತ್ತಮ. 120 ದೇಶಗಳಲ್ಲಿ ಬಡತನದಲ್ಲಿ ಮಿತಿ ಮೀರುತ್ತಿದೆ, ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 104ನೇ ಸ್ಥಾನದಲ್ಲಿದೆ. ಮೊದಲು ದೇಶದಲ್ಲಿ ಇರುವ ಇಂಥ ಸಮಸ್ಯೆಗಳನ್ನೂ  ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು  ವಾಗ್ದಾಳಿ ನಡೆಸಿದರು.

ಭಾಷೆ ವಿಷಯದಲ್ಲಿ ಸಮಸ್ಯೆ ಆದರೆ ನಮ್ಮಲ್ಲಿರುವ ಕನ್ನಡ ಸಂಘ ಸಂಸ್ಥೆ ಜತೆ ಸೇರಿ ನಮ್ಮ ಪ್ರತಿಭಟನೆ ಮಾಡಬೇಕಾಗುತ್ತದೆ. ಕನ್ನಡಕ್ಕೆ ಧಕ್ಕೆ ಬಂದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ರಾಷ್ಟ್ರ ಕ್ಕೆ ಮಾರಕ. ಇವೆರಡೂ ಒಂದೇ ನಾಣ್ಯದ ಎರಡು ಮುಖ. ಒಂದೆಡೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಮತ್ತೊಂದೆಡೆ ಜನ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗ ಭಾಷೆ ಇಟ್ಟುಕೊಂಡು ದಬ್ಬಾಳಿಕೆ ಪ್ರಾರಂಭ ಮಾಡಿವೆ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜನ  ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಆ ದಿನ ಬರುವುದು  ಬಹಳ ದೂರ ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X