Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಬಸ್ಸು ನಿಲ್ದಾಣಕ್ಕೆ...

ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ-ಚೆನ್ನಯರ ನಾಮಫಲಕ-ಪ್ರತಿಮೆ ಅನಾವರಣ: ಶಾಸಕ ಸಂಜೀವ ಮಠಂದೂರು

ವಾರ್ತಾಭಾರತಿವಾರ್ತಾಭಾರತಿ15 Oct 2022 7:46 PM IST
share
ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ-ಚೆನ್ನಯರ ನಾಮಫಲಕ-ಪ್ರತಿಮೆ ಅನಾವರಣ: ಶಾಸಕ ಸಂಜೀವ ಮಠಂದೂರು

ಪುತ್ತೂರು : ತುಳುನಾಡಿನ ವೀರ ಪುರುಷರೂ, ದೈವಾಂಶ ಪುರುಷರಾಗಿ ಆರಾಧಿಸಲ್ಪಡುವ ಜತೆಗೆ ನಾಡಿಗೆ ಹೊಸ ಸಂದೇಶ ನೀಡಿರುವ ಕೋಟಿ-ಚೆನ್ನಯರ ಹೆಸರನ್ನು ಶಾಶ್ವತವಾಗಿ ನೆನಪಿಸುವ ನಿಟ್ಟಿನಲ್ಲಿ ನಗರದ ಹೃದಯ ಭಾಗದಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಫಲಕ ಅಳವಡಿಸಿ, ಕೋಟಿ-ಚೆನ್ನಯರ ಪ್ರತಿಮೆಗಳನ್ನು ಅನಾವರಣ ಮಾಡುವ ಕಾರ್ಯ ಶೀಘ್ರದಲ್ಲೇ ಸರ್ಕಾರದ ವತಿಯಿಂದ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಅವರು ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು.  ಪಡುಮಲೆ ಮತ್ತು ಗೆಜ್ಜೆಗಿರಿ ಕ್ಷೇತ್ರದವರು ಈ ಕುರಿತು ಮನವಿ ಮಾಡಿಕೊಂಡಿದ್ದರು. ನಗರಸಭೆಯ ಅಧ್ಯಕ್ಷರು ಕೌನ್ಸಿಲ್ ನಿರ್ಣಯ ಮಾಡಿ ಜಿಲ್ಲಾಧಿಕಾರಿಗೆ ಕಳುಹಿಸಿಕೊಟ್ಟಿದ್ದರು. ಜಿಲ್ಲಾಧಿಕಾರಿಗಳು ಪೌರಾಡಳಿತ ಇಲಾಖೆಗೆ ಕಳುಸಿದ್ದು, ಸಚಿವ ಶ್ರೀರಾಮುಲು ಅವರು ಈ ವಿಶೇಷ ಆದೇಶ ಮಾಡಿಸಿದ್ದಾರೆ. ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಜಯಕರ ಶೆಟ್ಟಿ ಅವರು ಮುತುವರ್ಜಿ ವಹಿಸಿದ್ದರು. ಸಂಸದ ನಳಿನ್‍ಕುಮಾರ್, ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಈ ಎಲ್ಲರ ಪ್ರಯತ್ನದ ಫಲವಾಗಿ ಸರ್ಕಾರದಿಂದ ಈ ಕೆಲಸ ಆಗಿದೆ. ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಕೋಟಿ-ಚೆನ್ನಯರ ಹೆಸರಿಡಬೇಕೆಂಬ ಬೇಡಿಕೆ ಇದ್ದು, ಮುಂದಿನ ದಿನಗಳಲ್ಲಿ ಆ ಕೆಲಸವೂ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಕೆಲವೇ ದಿನಗಳಲ್ಲಿ ದಿನ ನಿಗದಿ ಪಡಿಸಿ ಸಚಿವರಾದ ಶ್ರೀರಾಮುಲು, ಸುನಿಲ್‍ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸಂಸದ ನಳಿನ್‍ಕುಮಾರ್ ಕಟೀಲು ಅವರನ್ನು ಬರಮಾಡಿಕೊಂಡು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ `ಕೋಟಿ-ಚೆನ್ನಯ' ನಾಪಫಲಕ ಅಳವಡಿಸುವ, ಪ್ರತಿಮೆ ಅನಾವರಣ ಮಾಡುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ನಗರಸಭೆಯ ಅಧ್ಯಕ್ಷ ಕೆ.ಜೀವಂಧರ್ ಜೈನ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ,  ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರುಷೋತ್ತಮ ಮುಂಗ್ಲಿಮನೆ, ನಿತೀಶ್‍ ಕುಮಾರ್ ಶಾಂತಿವನ, ಉಪಾಧ್ಯಕ್ಷ ಜಯರಾಮ ಪೂಜಾರಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಮುಖಂಡ ಸುನಿಲ್ ದಡ್ಡು ಮತ್ತಿತರರು ಉಪಸ್ಥಿತರಿದ್ದರು.

ಶಾಸಕರಿಗೆ ಬಿಲ್ಲವ ಸಮಾಜದ ಅಭಿನಂದನೆ

ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡುವಲ್ಲಿ ಶ್ರಮಿಸಿದ ಶಾಸಕ ಸಂಜೀವ ಮಠಂದೂರು ಅವರಿಗೆ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಜಯಂತ ನಡುಬೈಲು ಅವರು ಶಾಲು ಹೊದಿಸಿ, ಪುಷ್ಪಗುಚ್ಚ ನೀಡಿ ಅಭಿನಂದಿಸಿದರು. ಬಿಲ್ಲವ ಸಂಘದ ಪ್ರಮುಖರಾದ ಶಶಿಧರ್ ಕಿನ್ನಿಮಜಲು, ನಾರಾಯಣ ಪೂಜಾರಿ ಕುರಿಕ್ಕಾರ, ಚಂದ್ರಕಾಂತ ಶಾಂತಿವನ, ಬಾಬು ಪೂಜಾರಿ ಇಡ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

ಪುತ್ತೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರು ಇರಿಸಲು ಕಾರಣಕರ್ತರಾದ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದಿಂದ ಅಭಿನಂದಿಸಲಾಯಿತು.

ಪುತ್ತೂರು ಪ್ರವಾಸಿ ಮಂದಿರದಲ್ಲಿ ಶಾಸಕರನ್ನು ಭೇಟಿ ಮಾಡಿದ ಸಮಾಜದ ಮುಖಂಡರು ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು. ಗೆಜ್ಜೆಗಿರಿ ಮೂಲಸ್ಥಾನ ಕ್ಷೇತ್ರದ ಗೌರವಾಧ್ಯಕ್ಷರೂ, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರೂ ಆದ ಜಯಂತ ನಡುಬೈಲ್ ಮಾತನಾಡಿ, ಮೂರು ವರ್ಷಗಳ ಹಿಂದೆ ಪುತ್ತೂರು ಬಿಲ್ಲವ ಸಂಘ ಮತ್ತು ಪುತ್ತೂರು ಯುವವಾಹಿನಿ ಘಟಕದ ವತಿಯಿಂದ ಶಾಸಕರನ್ನು ಭೇಟಿ ಮಾಡಿ ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವಂತೆ ಮನವಿ ಮಾಡಿದ್ದೆವು. ಈ ಮನವಿಯನ್ನು ಸ್ವೀಕರಿಸಿದ ಶಾಸಕರು ಗಂಭೀರ ಪ್ರಯತ್ನ ಮಾಡಿ ಅದು ಸರಕಾರದಿಂದ ಮಂಜೂರಾಗುವವರೆಗೂ ಬೆನ್ನು ಬಿಡದೆ ಪ್ರಯತ್ನ ಮಾಡಿದ್ದಾರೆ. ಇದಕ್ಕಾಗಿ ಇಡೀ ಬಿಲ್ಲವ ಸಮಾಜದ ಪರವಾಗಿ ಶಾಸಕರನ್ನು ಅಭಿನಂದಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಆರ್.ಸಿ. ನಾರಾಯಣ ರೆಂಜ, ಶಶಿಧರ ಕಿನ್ನಿಮಜಲ್, ಚಂದ್ರಕಾಂತ್ ಶಾಂತಿವನ, ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಪೂಜಾರಿ ಕುರಿಕ್ಕಾರ, ಬಾಬು ಪೂಜಾರಿ ಇದ್ಪಾಡಿ, ಜಯರಾಮ ಪೂಜಾರಿ ಒತ್ತೆಮುಂಡೂರು, ಸುನಿಲ್ ದಡ್ಡು ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X