ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಉಡುಪಿ, ಅ.15: ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಾಗಿದ್ದ ಬಾವ್ತಿಸ್ ಡಿಸೋಜ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರಾದ ಗೋಪಾಲ ದೇವಾಡಿಗ, ಹರೀಶ್ ಆಚಾರ್ಯ, ಪ್ರವೀಣ್ ಡಿಸೋಜ, ರಾಘವೇಂದ್ರ ಕೆಳ್ಕರ್ ಅವರನ್ನು ಶಾಸಕ ಕೆ.ರಘುಪತಿ ಭಟ್ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನೀಲಾವರ ಗ್ರಾಪಂ ಅಧ್ಯಕ್ಷ ಮಹೇಂದ್ರ ಕುಮಾರ್, ಉಪಾಧ್ಯಕ್ಷೆ ಬೇಬಿ, ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯದರ್ಶಿ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Next Story





