ಶಾಸಕ ಹರೀಶ್ ಪೂಂಜಾ ಪ್ರಕರಣದ ಸಮಗ್ರ ತನಿಖೆಗೆ ಸಚಿವ ಎಸ್.ಅಂಗಾರ ಸೂಚನೆ
ಸಚಿವ ಎಸ್.ಅಂಗಾರ
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹತ್ಯೆ ಯತ್ನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ವಿನಂತಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಶಾಸಕ ಪೂಂಜ ಅವರಿಗೆ ಬೆದರಿಕೆ ಒಡ್ಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕರಾವಳಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ದುಷ್ಕರ್ಮಿಗಳ ಜಾಲ ಇದರೆ ಹಿಂದೆ ಇದೆ ಎನ್ನುವ ಶಂಕೆ ಇದೆ. ಸಮಗ್ರ ತನಿಖೆ ನಡೆಸಿ ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story