ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೈಂದೂರು, ಅ.15: ಟಿಪ್ಪರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಅ.14ರಂದು ಸಂಜೆ 7 ಗಂಟೆ ಸುಮಾರಿಗೆ ಶಿರೂರು ಕೆಳಪೇಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಶಿರೂರಿನ ರವಿ ಮೇಸ್ತ ಎಂದು ಗುರುತಿಸಲಾಗಿದೆ. ಶಿರೂರು ಕೆಳಪೇಟೆಯ ಯೂಟರ್ನ್ ಬಳಿ ರಸ್ತೆ ದಾಟಲು ನಿಂತಿದ್ದ ಬೈಕಿಗೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಬೈಕ್ ಹಾಗೂ ಸವಾರ ಲಾರಿಯ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳ ದಲ್ಲಿಯೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





