ಮಡಿಕೇರಿ | ಪೆಟ್ರೋಲ್ ಬಾಂಬ್ ಸ್ಫೋಟಿಸುವ ಬೆದರಿಕೆ: ಆರೋಪ
ಆಡಿಯೊ ವೈರಲ್: ಇಬ್ಬರು ಪೊಲೀಸ್ ವಶ
ಸಾಂದರ್ಭಿಕ ಚಿತ್ರ
ಮಡಿಕೇರಿ, ಅ.15: ವಿವಿಧೆಡೆ ಪೆಟ್ರೋಲ್ ಬಾಂಬ್ ಸ್ಫೋಟಿಸುವ ಮೂಲಕ ಸಮಾಜದಲ್ಲಿ ಭಯದ ವಾತಾವರಣವನ್ನುಂಟು ಮಾಡುವ ಬಗ್ಗೆ ಮೊಬೈಲ್ನಲ್ಲಿ ಬೆದರಿಕೆಯ ಆಡಿಯೊ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಡಿಕೇರಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ನಗರದ ಓರ್ವ ಚುನಾಯಿತ ಜನಪ್ರತಿನಿಧಿ ಹಾಗೂ ಬೆಟ್ಟಗೇರಿಯ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕೆಲವು ದಿನಗಳ ಹಿಂದೆ ಇವರಿಬ್ಬರು ನಡೆಸಿದ ಮೊಬೈಲ್ ಸಂಭಾಷಣೆ ಇದೀಗ ವೈರಲ್ ಆಗಿದ್ದು, ನಗರದ ಜನಪ್ರತಿನಿಧಿ ಪೆಟ್ರೋಲ್ ಬಾಂಬ್ ಹಾಕಿ ಆತಂಕ ಮೂಡಿಸುವ ಬೆದರಿಕೆ ಆರೋಪ ಕೇಳಿ ಬಂದಿದೆ.
ಈ ಕುರಿತು ಶೇಷಪ್ಪಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶನಿವಾರ ಇಬ್ಬರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ
Next Story